ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಫಿನಾಡಲ್ಲಿಯೂ ಕೇಳಿ ಬಂತು ಮತದಾನ ಬಹಿಷ್ಕಾರದ ಕೂಗು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 13: ವಿಧಾನ ಸಭೆ ಮತ್ತು ಲೋಕಸಭೆ ಚುನಾವಣೆ ಬರುತ್ತಿದ್ದಂತೆಯೇ ಚಿಕ್ಕಮಗಳೂರಿನ ಕೆಲ ಭಾಗದಲ್ಲಿ ಮತದಾನ ಬಹಿಷ್ಕಾರ ಮಾಡೋದು ಸಾಮಾನ್ಯ. ಆದರೆ ಈ ಬಾರಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ ಆದ ಎರಡೇ ದಿನದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಒಂದು ಹಳ್ಳಿಯಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ.

ಮರಿತೊಟ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊದಲ ಮನೆಯ ಗ್ರಾಮಸ್ಥರು ಈ ಬಾರೀ ಲೋಕ ಸಭೆ ಚುನಾವಣೆಯ ಮತದಾನ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ ದ್ವಾರ ಬಾಗಿಲಿನಲ್ಲಿ ಈ ಬಾರಿ ಮತದಾನ ಬಹಿಷ್ಕಾರ ಎಂದೂ ಬೋರ್ಡ್ ಹಾಕಿದ್ದಾರೆ.

Modala Mane villagers boycott election in this time

ಮೊದಲ ಮನೆ ಗ್ರಾಮದಲ್ಲಿ 22 ಕ್ಕೂ ಹೆಚ್ಚು ಮನೆಗಳಿದ್ದು, ಈ ಗ್ರಾಮಕ್ಕೆ ಹೋಗಲು ಸರಿಯಾದ ರಸ್ತೆಯಿಲ್ಲ. ವಿದ್ಯುತ್ ಸಂಪರ್ಕವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಂದ ಹಲವಾರು ವರ್ಷಗಳಿಂದ ವಂಚಿತವಾಗಿದ್ದು, ಹಲವಾರು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಈ ಕಾರಣಕ್ಕಾಗಿ ಈ ಬಾರಿ ಲೋಕಸಭಾ ಚುನಾವಣೆಯ ಮತದಾನವನ್ನು ಗ್ರಾಮಸ್ಥರು ಬಹಿಷ್ಕಾರ ಮಾಡಿದ್ದಾರೆ.

ಜನಪ್ರತಿನಿಧಿಗಳಿಗೆ ಶುರುವಾಯ್ತು ಚುನಾವಣೆ ಬಹಿಷ್ಕಾರದ ಬಿಸಿಜನಪ್ರತಿನಿಧಿಗಳಿಗೆ ಶುರುವಾಯ್ತು ಚುನಾವಣೆ ಬಹಿಷ್ಕಾರದ ಬಿಸಿ

ತಾಲೂಕು ಕೇಂದ್ರದಿಂದ ಕೇವಲ 5 ಕೀ.ಮೀ. ದೂರದಲ್ಲಿರುವ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಕೂಡ ಇಲ್ಲ. ಈ ಗ್ರಾಮ ತುಂಬಾ ಇಳಿಜಾರು ಪ್ರದೇಶವಾದ್ದರಿಂದ ಮಳೆಗಾಲದಲ್ಲಿ ಜನರು ಮತ್ತು ವಾಹನ ಸಂಚಾರ ಓಡಾಡ ತುಂಬಾ ಕಷ್ಟದಾಯಕವಾಗಿರುತ್ತದೆ.

Modala Mane villagers boycott election in this time

ವಿದ್ಯುತ್ ಸಂಪರ್ಕವಿದ್ದರೂ ನಾನಾ ಕಾರಣಗಳಿಂದ ವಿದ್ಯುತ್ ಉಪಕರಣ ಬಳಸುವಂತಿಲ್ಲ ಎಂಬ ಆರೋಪಗಳು ಗ್ರಾಮಸ್ಥರು ಮಾಡುತ್ತಿದ್ದು, ಈ ಎಲ್ಲಾ ಕಾರಣಗಳಿಂದ ಗ್ರಾಮಸ್ಥರು ಬೇಸತ್ತು ಮತದಾನ ಬಹಿಷ್ಕಾರ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
In Chikkamagaluru district, Modala Mane villagers said they would boycott election in this time. There is no right road to go to the village. No electricity connection, no drinking water system.For this reason they are boycotting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X