ಸ್ನಾನ ಮಾಡುತ್ತಿದ್ದ ವಿಡಿಯೋ ಮಾಡಿ ತಂದೆಯಿಂದಲೇ ಕಿರುಕುಳ; ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು, ಮೇ 27: ಮಗಳು ಸ್ನಾನ ಮಾಡುತ್ತಿರುವುದನ್ನು ವಿಡಿಯೋ ಮಾಡಿ ಅಪ್ಪನೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದರಿಂದ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಹಲಸೂರಿನಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಯುವತಿಯ ತಾಯಿ ತಂದೆ ಮೂರು ತಿಂಗಳಿನಿಂದ ಬೇರೆಯಾಗಿ ವಾಸಿಸುತ್ತಿದ್ದರು. ತಾಯಿ ಬೇರೆಡೆ ವಾಸವಿದ್ದರು. ಅಪ್ಪ-ಮಗಳು ಒಂದೇ ಮನೆಯಲ್ಲಿದ್ದರು. ಈ ವೇಳೆ ತಂದೆ, ತಾನೇ ಸಾಕಿದ 18 ವರ್ಷದ ಮಗಳು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ದಿನವೂ ಕುಡಿದು ಬಂದು ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ತಂದೆಯ ಈ ಕಿರುಕುಳಕ್ಕೆ ಬೇಸತ್ತ ಮಗಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ. ಮೇ.20ರಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಸ್ಥಳೀಯರು ಯುವತಿಯನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ ಈ ಯುವತಿ ಮೃತಪಟ್ಟಿದ್ದಾಳೆ.

Daughter Commited Suicide By Fathers Sexual Harrasment In Chikkamagaluru

ತಂದೆ ಸುಬ್ರಹ್ಮಣ್ಯ (54) ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+