ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಲ್ಲೂ ಮಂಗನ ಕಾಯಿಲೆ ಕಾಣಿಸಿಕೊಂಡಿದೆಯಾ?

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 10: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಲವೇ ದಿನಗಳ ಹಿಂದೆ ಹಕ್ಕಿ ಜ್ವರದ ಭೀತಿ ಎದುರಾಗಿತ್ತು. ಈಗ ಮಂಗನ ಕಾಯಿಲೆಯ ಆತಂಕ ಕಾಡುತ್ತಿದೆ.

ಕಳೆದ ಹಲವು ತಿಂಗಳುಗಳಿಂದ ಚಿಕ್ಕಮಗಳೂರು - ಶಿವಮೊಗ್ಗ ಗಡಿ ಭಾಗದಲ್ಲಿ ಕಾಣಿಸಿಕೊಂಡಿದ್ದ ಮಂಗನ ಕಾಯಿಲೆ ಈಗ ಚಿಕ್ಕಮಗಳೂರಿಗೂ ಹರಡಿದೆಯಾ ಎಂಬ ಶಂಕೆ ಉಂಟಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಚಿಕ್ಕಮಗಳೂರು ನಗರದ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಮಂಗವೊಂದು ಸತ್ತು ಬಿದ್ದಿದೆ.

Monkey Fever Suspect In Chikkamagaluru District

 ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ; ಕೃಷಿಕ ಸಾವು ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ; ಕೃಷಿಕ ಸಾವು

ಇಂದು ಬೆಳಿಗ್ಗೆ ಕಾಲೇಜು ಆವರಣದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ಜನರು ಮಂಗವೊಂದು ಸತ್ತು ಬಿದ್ದಿರುವುದನ್ನು ಕಂಡು ಆತಂಕಗೊಂಡಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಬಂದು ವಿಚಾರಣೆ ನಡೆಸಿದ್ದಾರೆ. ಇನ್ನು‌ ಪರೀಕ್ಷೆ ನಂತರ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದ್ದು, ಅಲ್ಲಿಯವರೆಗೂ ಜನರಲ್ಲಿ ಆತಂಕ ದೂರವಾಗುವುದಿಲ್ಲ. ಶೀಘ್ರದಲ್ಲಿ ಆರೋಗ್ಯ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

English summary
There is a suspect of monkey fever in chikkamagaluru district as monkey died today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X