• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಎಸ್ ವೈ ವಿಶ್ವಾಸಮತ ಸಾಬೀತು ಯಶಸ್ಸಿಗೆ ಪ್ರಾರ್ಥಿಸಿ ಎಂ.ಪಿ.ಕುಮಾರಸ್ವಾಮಿ ಪ್ರಾರ್ಥನೆ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಜುಲೈ 28: ನಾಳೆ (ಸೋಮವಾರ) ಯಡಿಯೂರಪ್ಪ ಅವರು ನಡೆಸುವ ವಿಶ್ವಾಸಮತ ಯಾಚನೆ ಯಶಸ್ಸಿಗಾಗಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರು ದೇವರ ಮೊರೆ ಹೋಗಿದ್ದಾರೆ. ಅದಕ್ಕಾಗಿ ಭಾನುವಾರದಂದು ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ಯುಡಿಯೂರಪ್ಪ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಮೂಡಿಗೆರೆಯ ಬಿಜೆಪಿ ಶಾಸಕ ಕುಮಾರಸ್ವಾಮಿ. ಚಿಕ್ಕಮಗಳೂರು ಜಿಲ್ಲೆಯ‌ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ಕಾಲಭೈರವೇಶ್ವರನ ದೇವಾಲಯ ಇದೆ.

17 ಶಾಸಕರು ಅನರ್ಹ, ಸದನದ ಬಲಾಬಲ, ಬಿಎಸ್ವೈಗೆ ಶ್ರೀರಕ್ಷೆ!17 ಶಾಸಕರು ಅನರ್ಹ, ಸದನದ ಬಲಾಬಲ, ಬಿಎಸ್ವೈಗೆ ಶ್ರೀರಕ್ಷೆ!

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡುವರಿದ್ದು, ಆ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ‌ ಭಾನುವಾರ ದೇವರ ಮೊರೆ ಹೋಗಿದ್ದಾರೆ. ಬಿಜೆಪಿ ಕಾರ್ಯಕರ್ತರೊಂದಿಗೆ ಮೂಡಿಗೆರೆಯ ದೇವರಮನೆಯಲ್ಲಿ ಇರುವ ಕಾಲಭೈರವೇಶ್ವರನ ದೇವಸ್ಥಾನದಲ್ಲಿ ಶಾಸಕ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಹುಮತ ಸಾಬೀತಿಗೆ ಯಾವುದೇ ವಿಘ್ನಗಳು ಎದುರಾಗಬಾರದು. ಬಹುಮತ ಸಾಬೀತು ಪಡಿಸಿ, ಯಶಸ್ವಿಯಾಗಿ ಆಡಳಿತ ನಡೆಸಲಿ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ವಿಶೇಷ ಪೂಜೆ, ಪ್ರಾರ್ಥನೆ ಮಾಡಿದ್ದಾರೆ.

English summary
Chikkamagaluru district Moodigere MLA M.P. Kumaraswamy offered prayer to God on Sunday, for BSY trust vote win.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X