ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಶೃಂಗೇರಿಯಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ

|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್‌ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಬಿಜೆಪಿ ಪಕ್ಷದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಕೂಡ ಸೇರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

More Than 30 BJP Workers Arrested in Sringeri over Protest Against Siddaramaiah

"ಬಿಜೆಪಿ, ಆರ್ಎಸ್ಎಸ್ ನವರ ಗೊಡ್ಡು ಬೆದರಿಕೆಗೆ ಬೆದರುವುದಿಲ್ಲ. ನಮ್ಮಲ್ಲೂ ಕಾರ್ಯಕರ್ತರಿದ್ದಾರೆ. ಬಿಜೆಪಿಯಲ್ಲಿ ಮಾತ್ರನಾ ಕಾರ್ಯಕರ್ತರು ಇರುವುದೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಇವರೊಬ್ಬರಿಗೇನಾ ರಾಜಕೀಯ ಮಾಡೋಕೆ ಬರೋದು. ನಾನು ಇದಕ್ಕೆಲ್ಲ ಹೆದುರುವುದಿಲ್ಲ. ಬಿಜೆಪಿ, ಆರ್ಎಸ್ಎಸ್‌ನವರ ಬೆದರಿಕೆ ಹೆದರುವುದಕ್ಕೆ ಆಗುತ್ತದೆಯೇ? ಇವರಿಗೆ ಸತ್ಯ ಹೇಳಿದ್ರೆ ಮೈ ಪರಚುಕೊಳ್ತಾ ಇದ್ದಾರೆ" ಎಂದು ವ್ಯಂಗ್ಯವಾಡಿದ್ದಾರೆ

ಇತ್ತ, ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣ ಕುರಿತು ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ದಾಳಿ ಮಾಡಿದಾಗ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ದಾಳಿಕೋರರ ರಕ್ಷಣೆಗೆ ನಿಂತಿದ್ದರು ಎಂದಿರುವ ಕಾಂಗ್ರೆಸ್, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದೆ.

"ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ.. ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ" ಎಂದು ಒತ್ತಾಯಿಸಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಮೊಟ್ಟೆ ಎಸೆದು, ಘೇರಾವ್ ಹಾಕಿದ ಘಟನೆಗೆ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜಕೀಯ ನಾಯಕರು ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಯ ಕೆಲವು ನಾಯಕರು ಘಟನೆಯನ್ನು ವಿರೋಧಿಸಿ, ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

Recommended Video

KL Rahul ಮಾಡಿದ ತ್ಯಾಗದಿಂದ ಟೀಂ‌ ಇಂಡಿಯಾ ಗೆದ್ದಿದ್ದು ಹೇಗೆ ಗೊತ್ತಾ? | *Cricket | OneIndia Kannada

English summary
More Than 30 BJP Workers Arrested in chikkamagaluru's Sringeri over Protest Against Siddaramaiah. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X