ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಲ್ಗೋಡು ಗ್ರಾಮದಲ್ಲಿ ಬಿಜೆಪಿ ಸೇರಿದ 300ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್‌, 23: ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಈಗಿನಿಂದಲೇ ಕಸರತ್ತುಗಳು ನಡೆಯುತ್ತಿವೆ. ಮೂರು ಪಕ್ಷಗಳಿಂದಲೂ ಚುನಾವಣೆ ಪ್ರಚಾರ ಭರದಿಂದ ಸಾಗಿದ್ದು, ಹಾಗೆಯೇ ರಾಜಕೀಯ ನಾಯಕರು ಆರೋಪ ಪ್ರತ್ಯಾರೋಪಗಳನ್ನು ಮಾಡಲು ಶುರು ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್‌ ಕಾರ್ಯಕರ್ತರೆಲ್ಲರೂ ಬಿಜೆಪಿ ಸೇರಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಆರೋಪ ತಳ್ಳಿ ಹಾಕಿದ ಪೊಲೀಸರುಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಆರೋಪ ತಳ್ಳಿ ಹಾಕಿದ ಪೊಲೀಸರು

ಸುಮಾರು 50 ವರ್ಷಗಳ ಬಳಿಕ ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದವರಿಗೆ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಿದೆ. ಇದೊಂದೇ ಕಾರಣದಿಂದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಇಡೀ ಮಹಲ್ಗೋಡು ಗ್ರಾಮವೇ ಬಿಜೆಪಿ ಸೇರಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಗ್ರಾಮದ 300ಕ್ಕೂ ಅಧಿಕ ಪುರುಷರು ಹಾಗೂ ಮಹಿಳೆಯರು ಬಿಜೆಪಿಗೆ ಸೇರಿದ್ದಾರೆ ಎನ್ನಲಾಗಿದೆ. ಮಹಲ್ಗೋಡು ಗ್ರಾಮದಲ್ಲಿ ಬಹುತೇಕ ಜನರು ಹಿಂದುಳಿದ ವರ್ಗಕ್ಕೆ ಸೇರಿದವರಿದ್ದಾರೆ. ಅವರೇ ಶಾಮಿಯಾನ ತಂದು, ಹಾಕಿ ಅವರೇ ಕಾರ್ಯಕ್ರಮ ಮಾಡಿ ಬಿಜೆಪಿ ಸೇರಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಾಜಿ ಸಚಿವ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದ್ದಾರೆ ಎನ್ನಲಾಗಿದೆ.

More than 300 Congress workers joined BJP in Mahalgodu village of Chikkamagaluru district

ಅಭಿವೃದ್ಧಿ ನೋಡಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ

ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವ ಎಂಟಿಬಿ ನಾಗರಾಜ್‌ ಇತ್ತೀಚೆಗಷ್ಟೇ ಹೊಸಕೋಟೆಯಲ್ಲಿ ತಿಳಿಸಿದ್ದರು. ತಾಲೂಕಿನ ನಂದಗುಡಿ ಹೋಬಳಿಯ ನಡುವಿನಪುರದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ ಆದ ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ್ದ ಅವರು, ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿದ್ದ ಮೆಡಿಕಲ್‌ ಚೆನ್ನಕೇಶವ, ಆಲಪ್ಪನಹಳ್ಳಿ ರಮೇಶ್‌, ಎಂ.ಮುನಿರಾಜು, ಎನ್‌.ಕೆ.ನಾಗರಾಜ್‌ ಕುಟುಂಬದವರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರದಿಂದ ಬದಲಾವಣೆ ಆಗಿದೆ ಎಂದು ಜನರು ವಿಶ್ವಾಸ ಇಟ್ಟಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್‌ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಆಗುತ್ತಿರುವುದರಿಂದ ನಮ್ಮ ಅಭಿವೃದ್ಧಿ ನೋಡಿ ಜನ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ ಎಂದಿದ್ದರು.

More than 300 Congress workers joined BJP in Mahalgodu village of Chikkamagaluru district

ನಂತರ ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಸತೀಶ್‌ ಮಾತನಾಡಿದ್ದು, ಬಿಜೆಪಿ ಸರ್ಕಾರದಿಂದ ದೇಶದ ಅಭಿವೃದ್ಧಿ ಜೊತೆಗೆ ದೇಶದ ಭದ್ರತೆ ಸಹ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ನರೇಂದ್ರ ಮೋದಿ ಆಡಳಿತಕ್ಕೆ ಜನ ಬೆಂಬಲ ಸೂಚಿಸುತ್ತಿದ್ದಾರೆ. ದೇಶದ ಅಭಿವೃದ್ಧಿಯಾದರೆ ನಾವು ಕೂಡ ಅಭಿವೃದ್ಧಿ ಆಗುತ್ತೇವೆ ಎಂಬ ನಂಬಿಕೆ ಜನಸಾಮಾನ್ಯರಲ್ಲಿ ಇದೆ. ಆದ್ದರಿಂದ ದೇಶ ಹಾಗೂ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿ​ಕಾರಕ್ಕೆ ಬರಲಿದೆ ಎಂದರು.

English summary
Assembly election: More than 300 Congress workers join to BJP in Mahalgodu village of NR Pura taluk, Chikkamagaluru district, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X