ಚಿಕ್ಕಮಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 9ಕೆ.ಜಿಗೂ ಅಧಿಕ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಮಗಳೂರು, ಮಾರ್ಚ್ 23: ಕಾಫಿನಾಡು ಚಿಕ್ಕಮಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು ದಾಖಲೆ ಇಲ್ಲದ 2 ಕೋಟಿ 30 ಲಕ್ಷ ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ. ಮೌಲ್ಯದ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನವನ್ನು ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದ್ದಾರೆ. ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಚಿನ್ನಾಭರಣಗಳಿಗೆ ಸೂಕ್ತ ದಾಖಲೆ ಸಿಗದ ಕಾರಣ ವಾಹನದಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಆರ್‌ಎಲ್ ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಸೀರೆಗಳು ಸೀಜ್
ಇನ್ನು ಚಿಕ್ಕಮಗಳೂರಿನ ವಿಆರ್‌ಎಲ್ ಲಾಜಿಸ್ಟಿಕ್ಸ್ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಬೆಲೆಬಾಳುವ ಸಾವಿರಾರು ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚಂದನ್ ಕುಮಾರ್ ಜೈನ್ ಹೆಸರಿನಲ್ಲಿ ನಕಲಿ ವಿಳಾಸ, ಮೊಬೈಲ್ ನಂಬರ್ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳನ್ನು ತರಿಸಿಕೊಳ್ಳಲಾಗಿತ್ತು.
ಚಿಕ್ಕಮಗಳೂರಿನ ಜಯನಗರದಲ್ಲಿರುವ ವಿಆರ್‌ಎಲ್ ಲಾಜಿಸ್ಟಿಕ್ಸ್ ಗೋದಾಮಿಗೆ ಸೂರತ್ ಸೀರೆ ಫ್ಯಾಕ್ಟರಿಯಿಂದ ತರಿಸಿಕೊಳ್ಳಲಾಗಿದ್ದು, ಸೀರೆ ಫ್ಯಾಕ್ಟರಿ ಸಿಬ್ಬಂದಿ ಹಾಗೂ ಚಂದನ್ ಕುಮಾರ್ ಜೈನ್ ಪೊಲೀಸರ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಬಗ್ಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮುಳಗುಂದ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 24 ಲಕ್ಷ ರೂಪಾಯಿ ಪತ್ತೆ
ಇನ್ನು ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಹಣ, ಚಿನ್ನ, ಸೀರೆ ಹಾಗೂ ಇತರ ವಸ್ತುಗಳ ಸಾಗಾಟ ಜೋರಾಗಿದ್ದು, ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ಸಕ್ರಿಯರಾಗಿದ್ದಾರೆ. ಗದಗ ಪೊಲೀಸರ ಭರ್ಜರಿ ಕಾರ್ಯಚರಣೆ. ಇತ್ತು ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆಯ ಮುಳಗುಂದ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 24 ಲಕ್ಷ ರೂಪಾಯಿ ಪತ್ತೆಯಾಗಿತ್ತು.
ದಾವಣಗೆರೆಯಿಂದ ಗದಗ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಕಾರನಲ್ಲಿ 20 ಲಕ್ಷ 50 ಸಾವಿರ ರೂಪಾಯಿ ಹಾಗೂ ಬದಾಮಿ ತಾಲೂಕಿನ ಜಾಲಿಹಾಳದಿಂದ ಲಕ್ಷ್ಮೇಶ್ವರ ಕಡೆಗೆ ಹೊರಟ್ಟಿದ್ದ 4 ಲಕ್ಷ ರೂಪಾಯಿ ನಗದನ್ನು ಗದಗ ಪೊಲೀಸರು ವಶಕ್ಕೆ ಪಡೆದಿದ್ದರು. ಗದಗ ಎಸ್‌ಪಿ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಾಹನ ಖರೀದಿ, ಆಸ್ತಿ ಖರೀದಿಗೆ ಹಣ ತಗೆದುಕೊಂಡು ಹೊರಟ್ಟಿದ್ದೇವೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಆದರೆ ಸೂಕ್ತ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications