ಕಲುಷಿತವೋ..ವಿಷವೋ? ಜೋಡಿಲಿಂಗದಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣ ಹೋಮ: ಗ್ರಾಮಸ್ಥರಲ್ಲಿ ಆತಂಕ
ಚಿಕ್ಕಮಗಳೂರು, ಜುಲೈ 03: ಕೆರೆ ನೀರು ಕಲುಷಿತಗೊಡು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿ ಕೆರೆಯಲ್ಲೇ ತೆಲಾಗುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆರೆಯಲ್ಲಿದ್ದ ಮೀನುಗಳು ಏಕಾಏಕಿ ಸಾವನ್ನಪ್ಪಿದ್ದನ್ನು ಕಂಡ ಜೋಡಿ ಲಿಂಗದಹಳ್ಳಿ ಗ್ರಾಮಸ್ಥರು ಹೌಹಾರಿದ್ದಾರೆ. ಕೆರೆ ನೀರು ಕಲುಷಿತಗೊಂಡಿದ್ದರಿಂದಲೇ ಮೀನುಗಳು ಸಾವನ್ನಪ್ಪಿವೆಯೋ ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನಪ್ಪಿದ್ದಾವೋ ಎನ್ನುವುದು ಇನ್ನೂ ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ.

ಸಖರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮ ನೂರಾರು ರೈತರು ಕೂಡ ಇದೇ ಕೆರೆ ನೀರನ್ನು ಉಪಯೋಗಿಸುತ್ತಿದ್ದರು. ಸುಮಾರು 57 ಎಕರೆಯನ್ನು ಮೀನು ಸಾಕಾಣಿಕೆಗೆ ಗುತ್ತಿಗೆ ಪಡೆದು ಒಂದು ಲಕ್ಷಕ್ಕೂ ಅಧಿಕ ಮೀನುಗಳನ್ನು ಕೆರೆಗೆ ಬಿಡಲಾಗಿತ್ತು. ಜಾನುವಾರಗಳು ಹಾಗೂ ಹಳ್ಳಿಗರು ನಿತ್ಯ ಉಪಯೋಗಕ್ಕೂ ಕೂಡ ಇದೇ ನೀರನ್ನು ಅವಲಂಬಿಸಿದ್ದರು.
ಇದೀಗ ಕೆರೆಯಲ್ಲಿ ಮೀನುಗಳ ಮಾರಣ ಹೋಮದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಆತಂಕ ಕಾಡುತ್ತಿದೆ. ಜೊತೆಗೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆರೆಗೆ ವಿಷ ಹಾಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಚಾರ್ಮುಡಿ ಘಾಟ್ ರಸ್ತೆಯಲ್ಲಿ ಕೆಟ್ಟು ನಿಂತ ಲಾರಿ, ರಾತ್ರಿಯಿಂದ ಮುಂಜಾನೆಯವರಿಗೂ ಪರದಾಡಿದ ವಾಹನ ಸವಾರರು
ಚಿಕ್ಕಮಗಳೂರು: ಚಾರ್ಮುಡಿ ಘಾಟ್ ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ಪ್ರಯಾಣಿಕರು ಪರದಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ರಾತ್ರಿಯಿಂದ ಮುಂಜಾನೆಯವರಿಗೂ ವಾಹನ ಸವಾರರು ಪರದಾಡಿದ್ದಾರೆ.

ಚಾರ್ಮುಡಿ ಘಾಟ್ನ 6ನೇ ತಿರುವಿನಲ್ಲಿ ಲಾರಿ ಕೆಟ್ಟು ನಿಂತಿದೆ. ಇದರಿಂದ ರಾತ್ರಿ 11 ಗಂಟೆಯಿಂದ ಮುಂಜಾನೆ ನಾಲ್ಕು ಗಂಟೆಯವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ನ ದಟ್ಟ ಕಾಡಿನ ಮಧ್ಯೆ ನೂರಾರು ವಾಹನಗಳು ರಾತ್ರಿಯಿಡೀ ನಿಂತಲ್ಲೇ ನಿಂತಿರಬೇಕಾದ ಪರಿಸ್ಥಿತಿ ಅನುಭವಿಸಿವೆ. ಇದರಿಂದ ನೂರಾರು ವಾಹನ ಸವಾರರು ಚಾರ್ಮುಡಿ ಘಾಟ್‌ನಲ್ಲಿ ರಾತ್ರಿಪೂರ್ತಿ ಪರದಾಡಿದ್ದಾರೆ.












Click it and Unblock the Notifications