ಮೂಡಿಗೆರೆ: ಕಾಲೇಜು ಬಸ್ ಅಪಘಾತ, ಐವರು ವಿದ್ಯಾರ್ಥಿಗಳಿಗೆ ಗಾಯ, ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು, ಜ,16: ಪಿಯುಸಿ ಕಾಲೇಜು ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗುವ ವೇಳೆ ಬಸ್ ಅಪಘಾತಕ್ಕೀಡಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುತ್ತಿಗೆಪುರದ ಹರೀಶ್ ಪಿಯುಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಮೂಡಿಗೆ ತಾಲೂನಿಕ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ಗುಡ್ಡಕ್ಕೆ ಪಿಕ್ನಿಕ್ ತೆರಳಿದ್ದರು. ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗುವ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು, ಇದರ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆಗೆ ಧಾವಿಸಿದ ವಿದ್ಯಾರ್ಥಿಗಳ ಪೋಷಕರು
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ಮಲೆನಾಡಿನಲ್ಲೇ ಅತ್ಯಂತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಪ್ರತಿನಿತ್ಯ ಇಲ್ಲಿಗೆ ಪ್ರವಾಸಿಗರ ದಂಡೇ ಬರುತ್ತದೆ. ಇಲ್ಲಿ ಕಿರಿದಾದ ರಸ್ತೆಗಳು ಇದ್ದು, ಈ ರಸ್ತೆಯಲ್ಲಿ ಸಾಗುವಾಗ ಎಚ್ಚರಿಕೆ ವಹಿಸಬೇಕಾದ ಅಗತ್ಯತೆಯೂ ಇದೆ. ಆದರೆ ಯಾವುದೇ ಸಮಸ್ಯೆ ಇಲ್ಲದೆ ಪಿಕ್ನಿಕ್ ಮುಗಿಸಿಕೊಂಡ ವಿದ್ಯಾರ್ಥಿಗಳು ಮತ್ತೆ ಊರಿನತ್ತ ಮರಳುವಾಗ ಈ ಘಟನೆ ಸಂಭವಿಸಿದೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿದೆ.

ಶಾಲಾ ಬಸ್ ಡಿಕ್ಕಿ, ವಿದ್ಯಾರ್ಥಿ ಸಾವು
ಇನ್ನು ಇತ್ತೀಚೆಗಷ್ಟೇ ಶಾಲಾ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಅನಂತರಪುರ ರಸ್ತೆಯಲ್ಲಿ ನಡೆದಿತ್ತು. ಮೃತ ವಿದ್ಯಾರ್ಥಿಯನ್ನು ಪ್ರಶಾಂತ್ (18) ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ ಹಾಗೂ ಆತನ ಸ್ನೇಹಿತ ಪ್ರವೀಣ್ ಕಾಲೇಜು ಮುಗಿಸಿಕೊಂಡು ಹನುಮಂತ ನಗರದಲ್ಲಿರುವ ತಮ್ಮ ಮನೆಗಳಿಗೆ ದ್ವಿಚಕ್ರ ವಾಹನದಲ್ಲಿ ಅನಂತರಪುರ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ವೇಗವಾಗಿ ಬಂದ ಶಾಲಾ ಬಸ್ ಡಿಕ್ಕಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಭೀಕರ ರಸ್ತೆ ಅಪಘಾತದಲ್ಲಿ ಪ್ರಶಾಂತ್ ತಲೆಯ ಮೇಲೆ ಬಸ್‌ನ ಚಕ್ರ ಹರಿದಿದ್ದು, ಪ್ರವೀಣ ಸ್ಥಳದಲ್ಲೇ ಮೃತಪಟ್ಟಿದ್ದ. ಪ್ರವೀಣ್ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಬಳ್ಳಾರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತದಲ್ಲಿ ಪ್ರಶಾಂತ್ ಹಾಗೂ ಪ್ರವೀಣ್ ಇದ್ದ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು.












Click it and Unblock the Notifications