ಮೂಡಿಗೆರೆ: ತೇಜಸ್ವಿ ಸಾಹಿತ್ಯ ಯಾನ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಪಾಠ
ಕೊಟ್ಟಿಗೆಹಾರ, ಆಗಸ್ಟ್ 28: ''ಪರಿಸರಾಸಕ್ತಿ, ಸಾಹಿತ್ಯದ ಅಭಿರುಚಿ ಹುಟ್ಟಲು ಅದಕ್ಕೆ ಪೂರಕವಾದ ಪರಿಸರ ಬೇಕಾಗುತ್ತದೆ. ಒಬ್ಬ ಗುರು ಬೇಕಾಗುತ್ತದೆ. ಪ್ರೋತ್ಸಾಹ ನೀಡುವ ಸ್ಪೂರ್ತಿ ನೀಡುವ ವ್ಯಕ್ತಿ ಬೇಕಾಗುತ್ತದೆ. ತೇಜಸ್ವಿ ಅವರಿಗೆ ಪರಿಸರದ ಮೇಲೆ ಪ್ರೀತಿ ಹುಟ್ಟಲು ಅವರ ತಂದೆ ಕುವೆಂಪು ಅವರು ಕಾರಣ'' ಎಂದು ನಿವೃತ್ತ ಪ್ರಾದ್ಯಾಪಕರಾದ ಪ್ರೊ. ಬಿ.ತಿಪ್ಪೆರುದ್ರಪ್ಪ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೂಡಿಗೆರೆ ಹ್ಯಾಂಡ್‌ಪೋಸ್ಟ್‌ನ ತೋಟಗಾರಿಕಾ ಮಹಾವಿದ್ಯಾಲಯದ ವತಿಯಿಂದ ನಡೆದ ತೋಟಗಾರಿಕಾ ಕಾಲೇಜಿನಲ್ಲಿ ನಡೆದ ತೇಜಸ್ವಿ ಸಾಹಿತ್ಯ ಯಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಪರಿಸರದ ಕತೆ ಕೃತಿಯಲ್ಲಿ ಬರುವ ಚಿಕ್ಕ ಚಿಕ್ಕ ಘಟನೆಗಳಿಗೆ ನೇರವಾಗಿ ಪರಿಸರವಾದಕ್ಕೆ ಸಂಬಂಧ ಇಲ್ಲದೇ ಹೋದರೂ ಆ ಘಟನೆಗಳ ಮೂಲಕ ತೇಜಸ್ವಿ ಅವರು ನಡೆದು ಹಾದಿ ಹಾದಿಯ ದರ್ಶನವಾಗುತ್ತದೆ. ಪರಿಸರದ ಬಗ್ಗೆ ಬೆರಗು, ಆಸಕ್ತಿ ಮೂಡುತ್ತದೆ ಎಂದರು.
ಲೇಖಕ ಹಾಗೂ ತೇಜಸ್ವಿ ಒಡನಾಡಿ ಡಾ.ಪ್ರದೀಪ್ ಕೆಂಜಿಗೆ ಮಾತನಾಡಿ, ''ತೇಜಸ್ವಿ ಅವರ ಕೃತಿಗಳಲ್ಲಿ ಜೀವನೋತ್ಸಾಹದ ಪರಮಾವಧಿಯ ದರ್ಶನವಾಗುತ್ತದೆ. ಬದುಕಿನಲ್ಲಿ ಮಹತ್ವವಾದನ್ನು ಸಾಧಿಸುವ ಕನಸಿರುವವರಿಗೆ ತೇಜಸ್ವಿ ಅವರ ಕೃತಿಗಳು ಸ್ಪೂರ್ತಿದಾಯಕವಾಗಿದೆ'' ಎಂದರು.

ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ನಾರಾಯಣ ಎಸ್. ಮಾರ್ವಕರ್ ಮಾತನಾಡಿ, ''ಯುವಪೀಳಿಗೆಗ ಸಾಹಿತ್ಯದ ಬಗ್ಗೆ, ಪರಿಸರದ ಬಗ್ಗೆ ಆಸಕ್ತಿ ಮೂಡಿಸುವಂತೆ ಮಾಡಿದ್ದು ತೇಜಸ್ವಿ ಸಾಹಿತ್ಯಕೃತಿಗಳು. ತಮ್ಮ ಜೀವನಾನುಭವದಿಂದ ಮೂಡಿದ ಸಾಹಿತ್ಯ ಕೃತಿಗಳು ಹೊಸ ಓದುಗ ವರ್ಗವನ್ನು ಸೃಷ್ಟಿಸಿವೆ'' ಎಂದರು.
ತೇಜಸ್ವಿ ಒಡನಾಡಿ ಹಾಗೂ ಕಲಾವಿದರಾದ ಬಾಪು ದಿನೇಶ್ ಮಾತನಾಡಿ, ''ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಕೃತಿಗಳಲ್ಲಿ ಸಾಮಾನ್ಯರ ಬದುಕಿನ ಚಿತ್ರಣಗಳು ವ್ಯಾಪಕವಾಗಿ ಬರುತ್ತದೆ. ಸಾಮಾನ್ಯರ ಅಸಮಾನ್ಯತೆಯನ್ನು ತಮ್ಮ ಕೃತಿಗಳಲ್ಲಿ ಒಡಮೂಡಿಸಿದವರು ತೇಜಸ್ವಿ'' ಎಂದರು.
ಸಂವಾದ ಹಾಗೂ ತೇಜಸ್ವಿ ಅವರ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ತೇಜಸ್ವಿ ಬದುಕಿನ ಬಗೆ ಕಿರುಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತೋಟಗಾರಿಕಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ.ಮಾದಯ್ಯ ಡಿ, ಕನ್ನಡ ಪ್ರಾಧ್ಯಾಪಕರಾದ ದೀಪರಾಣಿ, ಪ್ರಾದ್ಯಾಪಕಾರದ ಸತೀಶ್, ಹರೀಶ್, ಯಲ್ಲೇಶ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕರಾದ ನಂದನ್ ಕುಪ್ಪಳ್ಳಿ, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್, ಸಾಹಿತ್ಯಾಭಿಮಾನಿಗಳಾದ ಡಾ.ಪ್ರೀತಮ್ ಶಿವಮೊಗ್ಗ, ಭಗತ್ ಮುಂತಾದವರು ಇದ್ದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬಗ್ಗೆ: ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರು ಈ ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದು, ಸರ್ಕಾರವು ಇವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಸ್ಥಾಪಿಸಲಾಗಿದೆ. ಈ ಮುಖಾಂತರ ತೇಜಸ್ವಿಯವರ ಸಾಹಿತ್ಯ, ಪರಿಸರ, ಫೋಟೋಗ್ರಫಿ, ಚಿತ್ರಕಲೆ, ಕೃಷಿ ಮುಂತಾದ ಹಲವಾರು ವಿಚಾರಧಾರೆಗಳನ್ನು ಯುವಜನಾಂಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಷ್ಠಾನವು ಕಾರ್ಯೋನ್ಮುಖವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಕನ್ನಡ ಸಾಹಿತ್ಯ-ಸಂಸ್ಕೃತಿ ಚಿಂತನೆಯ ಹೊಸ ದಿಗಂತಗಳ ಬಾಗಿಲುಗಳನ್ನು ತೆರೆಸಿದ ಲೇಖಕ. ಕ್ರಿಯಾಶೀಲತೆ ಮತ್ತು ಚಲನಶೀಲತೆ ಅವರ ಸಾಹಿತ್ಯದ ಕೇಂದ್ರ ಆಶಯ. ವ್ಯಕ್ತಿ ವಿಶಿಷ್ಟ ಸಿದ್ಧಾಂತದಿಂದ ಜೀವಕೇಂದ್ರಿತ ಜಗತ್ತಿನ ಶೋಧದ ಕಡೆಗೆ ಅವರ ಸಾಹಿತ್ಯ ವಿಕಾಸವಾಗುತ್ತ ಬೆಳೆಯುತ್ತದೆ. ತಮ್ಮ ಅನುಭವಗಳನ್ನೇ ಕಥನಗಳನ್ನಾಗಿಸಿ, ಅದಕ್ಕೆ ಹೊಸ ವೈಚಾರಿಕತೆ, ದಾರ್ಶನಿಕತೆ ಹಾಗೂ ಉಜ್ವಲ ಕಾಂತಿಯನ್ನು ದೊರಕಿಸಿಕೊಟ್ಟ ಕನ್ನಡದ ಅಪರೂಪದ ಲೇಖಕ ತೇಜಸ್ವಿ.
ಅವರ ಸಾಹಿತ್ಯದ ಅಭಿವ್ಯಕ್ತಿ ವಿಧಾನ, ಸ್ವರೂಪ, ಕಥನಕ್ರಮ, ಭಾಷೆಯ ಬಳಕೆ, ಹೊಸ ನುಡಿಗಟ್ಟುಗಳ ಶೋಧ ತಮ್ಮ ಎಲ್ಲ ಬರಹಗಳಲ್ಲಿ ನಿರಂತರವಾಗಿ ಅನ್ವೇಷಣೆಗೆ ಒಳಪಟ್ಟಿದ್ದವು ಎಂಬುದಕ್ಕೆ ಅವರ ಅಗಾಧ ಕೃತಿಗಳೇ ಸಾಕ್ಷಿಯಾಗಿವೆ. ಅನುವಾದ, ಚಿತ್ರಕಲೆ, ಫೋಟೋಗ್ರಫಿ, ಸಿತಾರ್ ವಾದನ , ಸಂಗೀತ ಆಸ್ವಾದನೆ, ಮೀನು ಶಿಕಾರಿ, ಬೇಟೆ, ಪಕ್ಷಿ ವೀಕ್ಷಣೆ, ಕೃಷಿ, ಯಂತ್ರ ರಿಪೇರಿ, ಚಾರಣ, ಕಂಪ್ಯೂಟರ್ ಬಗೆಗಿನ ಕುತೂಹಲ ಹಾಗೂ ಅದರ ಬಳಕೆಯ ಸಾಧ್ಯತೆಗಳು, ಅಡುಗೆ ಹೀಗೆ ಹತ್ತು ಹಲವು ಇವರ ಆಸಕ್ತಿ, ಅಭಿರುಚಿ, ಕುತೂಹಲಗಳಾಗಿದ್ದವು. ಹಾಗಾಗಿ ತೇಜಸ್ವಿ ಎಂದರೇನೆ ಒಂದು ವಿಸ್ಮಯ, ನಿಗೂಢ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications