Mangaluru-Bengaluru National Highway: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರಿಗೆ ಬಹುಮುಖ್ಯ ಮಾಹಿತಿ
Mangaluru-Bengaluru National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಿದೆ. ಈ ಮೂಲಕ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಕ್ರಾಂತಿಯಾಗುತ್ತಿದೆ. ಈಗಾಗಲೇ ಹಲವು ಉದ್ಘಾನೆ ಹಂತದಲ್ಲಿದ್ದರೆ, ಇನ್ನೂ ಕೆಲವು ನಿರ್ಮಾಣ ಹಂತದಲ್ಲಿವೆ. ಈ ನಡುವೆಯೇ ಕೆಲ ಸಮಸ್ಯೆಗಳು ಸಹ ಉದ್ಭವವಾಗುತ್ತಿವೆ. ಇನ್ನೂ ಕಾರ್ಯಾಚರಣೆಯಲ್ಲಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಇದೀಗ ಹೊಸ ನಿಯಮವನ್ನು ಹೊರಡಿಸಲಾಗಿದೆ. ಏನು ಹಾಗೂ ಯಾಕೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಪ್ರಮುಖ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತದೆ. ಉದ್ಘಾಟನೆಯಾದ ಆರಂಭದಲ್ಲಿ ಟೋಲ್ ಶುಲ್ದದ ವಿಚಾರಕ್ಕೆ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ವಾಗ್ಯೂದ್ಧಗಳೇ ನಡೆದಿರುವ ಉದಾಹರಣೆಗಳಿವೆ. ಈಗಲೂ ಕೂಡ ಈ ಎಕ್ಸ್‌ಪ್ರೆಸ್ ವೇ ಒಂದಲ್ಲ ಒಂದು ವಿಚಾರಕ್ಕೆ ಮುನ್ನಲೆಗೆ ಬರುತ್ತಿರುತ್ತದೆ. ಈ ನಡುವೆಯೇ ಇದೀಗ ಬೆಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ಹೊಸ ನಿಯಮವನ್ನು ಹೇರಲಾಗಿದೆ. ಏನದು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ..

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಕೆಲ ಜಿಲ್ಲೆಗಳ ಮೇಲೆ ಹಾದುಹೋಗುತ್ತದೆ. ಅದರಲ್ಲೂ, ಚಾರ್ಮಾಡಿ ಘಾಟಿ ಭಾಗದ ಈ ಹೆದ್ದಾರಿಯಲ್ಲಿ ಇದೀಗ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದೆ.
ಈ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಸಂಪರ್ಕ ಸೇತುವೆಯಂತಿದೆ. ಅದರಲ್ಲೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಾರ್ಮಾಡಿ ಘಾಟ್ನಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ಇಲ್ಲಿನ ಕೊಟ್ಟಿಗೆಹಾರದ ಬಳಿಯಿರುವ ಪೊಲೀಸ್ ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸಿದರೂ ಸಹ ಅಕ್ರಮವಾಗಿ ಮರಳು, ಗೋ ಸಾಗಾಟ ಹಾಗೂ ವಾಹನಗಳನ್ನ ಅಡ್ಡಗಟ್ಟಿ ದರೋಡೆ ಮಾಡುವುದು ಸೇರಿದಂತೆ ವಿವಿಧ ಅಪರಾಧ ಕೃತ್ಯಗಳು ನಡೆಯುತ್ತಿದ್ದು, ಈ ಹಿನ್ನೆಲೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.
ಇಂತಹ ಅಪರಾಧ ಚಟುವಟಿಕೆಗಳನ್ನ ನಿಯಂತ್ರಣಕ್ಕೆ ತರಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೊಳಿಸಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ, ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ 5 ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಈ ನಿಯಮ ಅನ್ವಯ ಆಗಲಿದೆ ಎಂದು ತಿಳಿಸಲಾಗಿದೆ.
ಚಾರ್ಮಾಡಿ ಫಾಟ್ ಕಡೆಗೆ ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಬರುವ ವಾಹನಗಳನ್ನು ಕೊಟ್ಟಿಗೆಹಾರ ಚೆಕ್ಪೋಸ್ಟ್ ಬಳಿ ನಿಲ್ಲಿಸಲಾಗುತ್ತದೆ. ಬಳಿಕ 5 ವಾಹನಗಳ ಜೊತೆ ಮಾಡಿ ಒಟ್ಟಿಗೆ ಕಳುಹಿಸಲಾಗುತ್ತದೆ. ಇಲ್ಲಿ ರಾತ್ರಿ ವೇಳೆ ಒಂದೊಂದೇ ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಪೊಲೀಸ್ ಇಲಾಖೆ ನಿಷೇಧ ಹೊರಡಿಸಿದೆ.
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ. 24 ಗಂಟೆಯೂ ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಓರ್ವ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಲ್ಲದೆ, ಚಾರ್ಮಾಡಿ ಘಾಟ್ನಲ್ಲೂ ಸಹ ಪೊಲೀಸ್ ವಾಹನ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನು ಒಂದು ವೇಳೆ ಅಪರಾಧ ಕೃತ್ಯ ಎಸಗಿರುವುದು ಕಂಡುಬಂದರೆ, ಅಂತಹವರನ್ನು ಬಂಧಿಸಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ. ಈ ಮೂಲಕ ಪೊಲೀಸರ ಈ ಮಹತ್ವದ ಕಾರ್ಯಕ್ಕೆ ವಾಹನ ಸವಾರರು ಸಾಥ್ ನೀಡಿದ್ದಾರೆ.
ಈ ಭಾಗದಲ್ಲಿ ಈಗಾಗಲೇ ಕಳ್ಳಸಾಗಣೆಗಳಂತಹ ಕೃತ್ಯಗಳು ತುಂಬಾ ನಡೆದಿವೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆದ್ದರಿಂದ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದ್ದಾರೆ.












Click it and Unblock the Notifications