New Parliament Building Inauguration: ಕರ್ನಾಟಕದ ಈ ಜಿಲ್ಲೆಯ ಪುರೋಹಿತರಿಂದ ನೂತನ ಸಂಸತ್ ಭವನದಲ್ಲಿ ಪೂಜಾ ಕೈಂಕರ್ಯ
ಚಿಕ್ಕಮಗಳೂರು, ಮೇ, 28: ಇಂದು ನವದೆಹಲಿಯಲ್ಲಿ ನೂತನ ಸಂಸತ್ ಭವನದ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಹಾಗೆಯೆ ಈ ನೂತನ ಸಂಸತ್ ಭವನದ ಉದ್ಘಾಟನೆಯ ಪೂಜಾ-ಕೈಂಕರ್ಯವನ್ನು ಕರ್ನಾಟಕದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಮೂವರು ಪುರೋಹಿತರು ನೆರವೇರಿಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
2020ರಲ್ಲಿ ಸಂಸತ್ ಭವನಕ್ಕೆ ಅಡಿಗಲ್ಲು ಹಾಕುವ ಪೂಜೆ ನೆರವೇರಿಸಿದ್ದು ಕೂಡ ಶೃಂಗೇರಿ ಪುರೋಹಿತರಾಗಿದ್ದರು. ಗಣೇಶ ಸೋಮಯಾಜಿ, ಶಿವಕುಮಾರ ಶರ್ಮ, ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಭೂಮಿ ಪೂಜೆ ನಡೆದಿತ್ತು. ಈ ವೇಳೆ ಒಟ್ಟು ಆರು ಜನ ಪುರೋಹಿತರಿಂದ ಭೂಮಿ ಪೂಜೆ ನೆರವೇರಿಸಲಾಗಿತ್ತು. ಹಾಗೆಯೆ ಇಂದು ಕೂಡ ನೂತನ ಸಂಸತ್ ಭವನದ ಉದ್ಘಾಟನೆಯ ಪೂಜಾ-ಕೈಂಕರ್ಯವನ್ನು ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಎಂಬುವವರು ನೆರವೇರಿಸಲಿದ್ದಾರೆ.

ಈ ಮೂವರು ಶೃಂಗೇರಿ ಪುರೋಹಿತರು ನಿನ್ನೆಯೇ ನಹದೆಹಲಿ ತಲುಪಿದ್ದು, ಈಗಾಗಲೇ ವಾಸ್ತು ಹೋಮ ಪೂಜೆ ಮುಗಿಸಿದ್ದಾರೆ. ಇನ್ನು ಇಂದು ಬೆಳಗ್ಗೆ ಗಣಪತಿ ಹೋಮವನ್ನು ಸಹ ನೆರವೇರಿಸಿದ್ದಾರೆ.
ನವದೆಹಲಿಯಲ್ಲಿ ಭಾರೀ ಬಿಗಿ ಭದ್ರತೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾನುವಾರ (ಮೇ 28) ನೂತನ ಸಂಸತ್ ಭವನ ಉದ್ಘಾಟನೆ ಸಮಾರಂಭ ನಡೆಯಲಿದೆ. ವಿವಾದಗಳ ಹಿನ್ನೆಲೆಯಲ್ಲಿ ನೂತನ ಸಂಸತ್ ಭವನದ ಸುತ್ತ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಮೂಲಕ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ತಿನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಯಾವುದೇ ಬೆಲೆ ತೆತ್ತಾದರೂ ನೂತನ ಸಂಸತ್ ಕಟ್ಟಡದ ಬಳಿ ತಮ್ಮ "ಮಹಿಳಾ ಮಹಾಪಂಚಾಯತ್" ಅನ್ನು ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಮಹಿಳಾ ಮಹಾಪಂಚಾಯತ್ ನಡೆಸಲು ಅನುಮತಿ ನೀಡದ ಕಾರಣ, ಯಾವುದೇ ಪ್ರತಿಭಟನಾಕಾರರಿಗೆ ಹೊಸ ಸಂಸತ್ ಭವನದತ್ತ ತೆರಳಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಸತ್ ಕಟ್ಟಡದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಲಿನ ಗಡಿ ಪ್ರದೇಶಗಳಾದ್ಯಂತ ತೀವ್ರ ಗಸ್ತು ತಿರುಗಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ. ಅಲ್ಲದೆ ಸಂಸತ್ ಕಟ್ಟಡದ ಆವರಣದ ಗೋಡೆಗಳ ಮೇಲೆ ದುಷ್ಕರ್ಮಿಗಳು ಪ್ರಧಾನಿ ವಿರೋಧಿ ಮತ್ತು ಭಾರತ ವಿರೋಧಿ ಬರಹಗಳ ಹಾಕಬಹುದು. ಇದಕ್ಕೆ ಅವಕಾಶ ಮಾಡಿಕೊಡದಂತೆ ಸೂಕ್ತ ಭದ್ರತೆವಹಿಸಲಾಗಿದೆ ಎಂಸು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ. ಹಾಘೆಯೆ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಇಂದು ನೂತನ ಸಂಸತ್ ಭವನದ ಮುಂದೆ "ಮಹಿಳಾ ಮಹಾಪಂಚಾಯತ್" ನಡೆಸಲು ನಿರ್ಧರಿಸಿದ್ದು, ಇದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನವದೆಹಲಿ, ಮೇ, 28: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾನುವಾರ (ಮೇ 28) ನೂತನ ಸಂಸತ್ ಭವನ ಉದ್ಘಾಟನೆ ಸಮಾರಂಭ ನಡೆಯಲಿದೆ. ವಿವಾದಗಳ ಹಿನ್ನೆಲೆಯಲ್ಲಿ ನೂತನ ಸಂಸತ್ ಭವನದ ಸುತ್ತ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಮೂಲಕ ಬಿಗಿಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ತಿನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಯಾವುದೇ ಬೆಲೆ ತೆತ್ತಾದರೂ ನೂತನ ಸಂಸತ್ ಕಟ್ಟಡದ ಬಳಿ ತಮ್ಮ "ಮಹಿಳಾ ಮಹಾಪಂಚಾಯತ್" ಅನ್ನು ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಮಹಿಳಾ ಮಹಾಪಂಚಾಯತ್ ನಡೆಸಲು ಅನುಮತಿ ನೀಡದ ಕಾರಣ, ಯಾವುದೇ ಪ್ರತಿಭಟನಾಕಾರರಿಗೆ ಹೊಸ ಸಂಸತ್ ಭವನದತ್ತ ತೆರಳಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಸತ್ ಕಟ್ಟಡದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಲಿನ ಗಡಿ ಪ್ರದೇಶಗಳಾದ್ಯಂತ ತೀವ್ರ ಗಸ್ತು ತಿರುಗಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ. ಅಲ್ಲದೆ ಸಂಸತ್ ಕಟ್ಟಡದ ಆವರಣದ ಗೋಡೆಗಳ ಮೇಲೆ ದುಷ್ಕರ್ಮಿಗಳು ಪ್ರಧಾನಿ ವಿರೋಧಿ ಮತ್ತು ಭಾರತ ವಿರೋಧಿ ಬರಹಗಳ ಹಾಕಬಹುದು. ಇದಕ್ಕೆ ಅವಕಾಶ ಮಾಡಿಕೊಡದಂತೆ ಸೂಕ್ತ ಭದ್ರತೆವಹಿಸಲಾಗಿದೆ ಎಂಸು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ. ಹಾಘೆಯೆ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಇಂದು ನೂತನ ಸಂಸತ್ ಭವನದ ಮುಂದೆ "ಮಹಿಳಾ ಮಹಾಪಂಚಾಯತ್" ನಡೆಸಲು ನಿರ್ಧರಿಸಿದ್ದು, ಇದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Click it and Unblock the Notifications