ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಸರ್ಗ ಚಂಡ ಮಾರುತದ ಎಫೆಕ್ಟ್: ಚಿಕ್ಕಮಗಳೂರಿನಲ್ಲಿ ಗಾಳಿ, ಮಳೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 3: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಎಚ್ಚರಿಕೆಯನ್ನು ಈ ಮುನ್ನವೇ ಹವಾಮಾನ ಇಲಾಖೆ ನೀಡಿದ್ದು, ಮಲೆನಾಡು ಭಾಗದಲ್ಲಿ ಗಾಳಿ, ಮಳೆಯ ಅಬ್ಬರ ಜೋರಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತಿದ್ದು, ಬೃಹತ್ ಮರಗಳು ಧರೆಗೆ ಉರುಳಿ ಬಿದ್ದಿವೆ. ಮೂಡಿಗೆರೆಯ ಜನ್ನಾಪುರ-ಅಣಜೂರು ಬಳಿ ಮರ ಉರುಳಿ ಬಿದ್ದಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

Nisarga Cyclone Effect: Wind And Rain Started In Chikkamagaluru District

ನಿಸರ್ಗ ಚಂಡಮಾರುತ ಎಫೆಕ್ಟ್; ಉಡುಪಿಯಲ್ಲಿ ಶುರುವಾದ ಮಳೆ ನಿಸರ್ಗ ಚಂಡಮಾರುತ ಎಫೆಕ್ಟ್; ಉಡುಪಿಯಲ್ಲಿ ಶುರುವಾದ ಮಳೆ

ಗಾಳಿಗೆ ಮರಗಳು ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ಸಹ ಮುರಿದಿವೆ. ಮಲೆನಾಡಿನಾದ್ಯಂತ ಭಾರೀ ಗಾಳಿ ಮಳೆಯ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ. ಕಳೆದ ಎರಡು ದಿನಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಲಿದೆ ಎಂದೂ ತಿಳಿದುಬಂದಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಮುಂಜಾನೆ ತುಂತುರು ಮಳೆ ಆರಂಭವಾಗಿ, ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.

Nisarga Cyclone Effect: Wind And Rain Started In Chikkamagaluru District

English summary
Heavy Wind And Rainfall In Chikkamagaluru District Due To Nisarga Cyclone Effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X