ಪ್ರವಾಸಿಗರೇ ಗಮನಿಸಿ..! ಚಿಕ್ಕಮಗಳೂರಿನಲ್ಲಿ ಈ ದಿನಗಳಲ್ಲಿ ಹೋಂ ಸ್ಟೇ, ರೆಸಾರ್ಟ್ ಬುಕ್ಕಿಂಗ್ ಇಲ್ಲ
ಚಿಕ್ಕಮಗಳೂರು, ಏಪ್ರಿಲ್ 15: 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ 25 ಹಾಗೂ ಏಪ್ರಿಲ್ 26 ರಂದು ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರನ್ನು ಹೋಂ ಸ್ಟೇ /ರೆಸಾರ್ಟ್‌ಗಳಲ್ಲಿ ಬುಕ್ಕಿಂಗ್ ಸ್ವೀಕರಿಸಬಾರದು ಎಂದು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಚಿಕ್ಕಮಗಳೂರು ರೆಸಾರ್ಟ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಜಿಲ್ಲೆಯಲ್ಲಿ ಹಾಗೂ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ಹೊರಗುಳಿಯಬಾರದು. ಪ್ರತಿಯೊಂದು ಮತವು ಅತ್ಯಮೂಲ್ಯ ಎಂಬ ತಾತ್ವಿಕ ನೆಲೆಗಟ್ಟಿನಡಿ ಏಪ್ರಿಲ್ 26 ರಂದು ಶೇ 100ರಷ್ಟು ಮತದಾನ ಆಗುವಂತೆ ನೋಡಿಕೊಳ್ಳುವುದು ಜಿಲ್ಲಾ ಚುನಾವಣಾಧಿಕಾರಿಗಳ ಕರ್ತವ್ಯವಾಗಿರುತ್ತದೆ,

ರಾಜ್ಯದಲ್ಲಿ ಶೇ 100 ರಷ್ಟು ಮತದಾನ ಮಾಡಿಸುವ ನಿಟ್ಟಿನಲ್ಲಿ ಏಪ್ರಿಲ್ 25 ಹಾಗೂ ಏಪ್ರಿಲ್ 26 ರಂದು ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರನ್ನು ಹೋಂ ಸ್ಟೇ / ರೆಸಾರ್ಟ್‌ಗಳಲ್ಲಿ ಬುಕ್ಕಿಂಗ್ ಸ್ವೀಕರಿಸದೆ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯನ್ನು ಯಶ್ವಸಿಗೊಳಿಸಲು ಜಿಲ್ಲಾಡಳಿತದೊಂದಿಗೆ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ದಿನಗಳಲ್ಲಿ ಮದ್ಯ ಮಾರಟ ನಿಷೇಧ
2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಏಪ್ರಿಲ್ 26ರ ಮತದಾನಕ್ಕೆ ಸಕಲ ಸಿದ್ಧತೆಯಾಗಿದೆ. ಈ ಮತದಾನ ದಿನದಂದು ಸಾರ್ವಜನಿಕ ಶಾಂತಿ ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 24ರ ಸಂಜೆ 5 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.












Click it and Unblock the Notifications