ಚಿಕ್ಕಮಗಳೂರು: ರಾಜ್ಯಮಟ್ಟದ ಗುಡ್ಡಗಾಡು ಓಟದಲ್ಲಿ ಭಾಗವಹಿಸಿದ ಹಿರಿಯರು, ಯುವಕರಿಗೆ ಉತ್ಸಾಹ
ಚಿಕ್ಕಮಗಳೂರು, ಜನವರಿ, 16: ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಯುವಕರು ಸೇರಿದಂತೆ ಹಿರಿಯ ವೃದ್ಧರು ಅತ್ಯಂತ ಕ್ರಿಯಾಶೀಲರಾಗಿ ಭಾಗವಹಿಸಿ. ದೇಹಕ್ಕೆ ವಯಸ್ಸಾಗಿದೆಯೇ ಹೊರತು ಮನಸ್ಸಿಗ ವಯಸ್ಸಾಗಿಲ್ಲ ಎಂದು ಸ್ಪರ್ಧೆಗಿಳಿಯುವ ಮೂಲಕ ಯುವಪೀಳಿಗೆಯನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿರುವುದು ಅತ್ಯಂತ ಸಂತಸದ ವಿಷಯ ಎಂದು ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಹೇಳಿದರು.
ನಗರದ ಜಿಲ್ಲಾ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಭಾನುವಾರ (ಜನವರಿ 15) ಜಿಲ್ಲಾಡಳಿತ ವತಿಯಿಂದ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಪರ್ಧೆಯಲ್ಲಿ 45 ರಿಂದ 70ರ ಆಸುಪಾಸಿನ ಹಿರಿಯ ನಾಗರೀಕರು ಭಾಗವಹಿಸುತ್ತಿರುವುದು ಅತ್ಯಂತ ಖುಷಿಯ ಸಂಗತಿಯಾಗಿದೆ. ಓಟದ ಸ್ಪರ್ಧೆಯಲ್ಲಿ ಹಿರಿಯ ನಾಗರೀಕರು, ವಿವಿಧ ವಯೋಮಾನದ ಯುವಕ-ಯುವತಿಯರು ಹಾಗೂ ಪುರುಷ-ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.
ಗುಡ್ಡಗಾಡು ಓಟದ ಸ್ಪರ್ಧೆಯ ವಿವರ
ಉಪವಿಭಾಗಾಧಿಕಾರಿ ಎಚ್.ಡಿ.ರಾಜೇಶ್ ಮಾತನಾಡಿ ಗುಡ್ಡಗಾಡು ಓಟದ ಸ್ಪರ್ಧೆಯ ಜಿಲ್ಲಾ ಮಟ್ಟದ ವಿಭಾಗದಲ್ಲಿ 14 ವರ್ಷದ ಯುವಕ-ಯುವತಿಯರಿಗೆ 2 ಕಿ.ಮೀ., 16 ವರ್ಷದವರಿಗೆ 3 ಕಿ.ಮೀ., 18 ವರ್ಷದವರಿಗೆ 4 ಕಿ.ಮೀ. ಓಟದಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಪುರುಷ, ಮಹಿಳೆಯರ ವಿಭಾಗದಲ್ಲಿ 10 ಕಿ.ಮೀ., 45 ರಿಂದ 55 ವರ್ಷದವರಿಗೆ 2 ಕಿ.ಮೀ. ಹಾಗೂ 55 ರಿಂದ ಮುಂದಿನ ವಯೋ ಮಾನದವರಿಗೆ 2 ಕಿ.ಮೀ. ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಆಯೋಜಿಸಲಾಗಿದ್ದ ಕ್ರೀಡೆಗಳ ಪಟ್ಟಿ
ಉತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡೆಗಳಾದ ಕೆಸರುಗದ್ದೆ ಓಟ, ಗಂಡ ಹೆಂಡತಿಯನ್ನು ಹೊತ್ತು ಓಡುವ ಸ್ಪರ್ಧೆ ಸೇರಿದಂತೆ ವಿವಿಧ ರೀತಿಯ ಕ್ರೀಡೆಗಳನ್ನು ನಗರದಲ್ಲಿ ಆಯೋಜಿಸಲಾಗಿದೆ. ಚೆಸ್‍ವೊಂದನ್ನು ಹೊರತುಪಡಿಸಿ ವಾಲಿಬಾಲ್, ಕಬ್ಬಡಿ, ಯೋಗ, ಹ್ಯಾಂಡ್‍ಬಾಲ್ ಹಾಗೂ ಬಾಸ್ಕೆಲ್ ಬಾಲ್ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಅಜಯ್ ಕುಮಾರ್, ಅನಂತ್ ಕುಮಾರ್, ಶ್ರೀನಿವಾಸ್, ಪ್ರಾನ್ಸಿಸ್, ಕ್ರೀಡಾಪಟು ಉಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications