ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, ಓರ್ವ ಮಗು ಸಾವು, 29 ಜನರಿಗೆ ಗಾಯ
ಚಿಕ್ಕಮಗಳೂರು, ಏಪ್ರಿಲ್, 28: ಪ್ರವಾಸಕ್ಕೆ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ-ಮಾಣಿಕ್ಯಾಧಾರ ಮಾರ್ಗದ ಮಧ್ಯೆ ನಡೆದಿದೆ.
100 ಅಡಿ ಕಂದಕಕ್ಕೆ ಉರುಳಿದ ಬಸ್: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ್ದು, ಈ ವೇಳೆ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಜನರಿಗೆ ಗಂಭೀರ ಗಾಯವಾಗಿದ್ದು, ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಗು ಮಹಮದ್ ನವಾಜ್ (6) ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದದ್ದು ಹೇಗೆ?: ಇನ್ನು ಇವರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದು. ಈ ವೇಳೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಚಲಿಸುತ್ತಿದ್ದಂತೆ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಇದರಿಂದ ಬಸ್ ಪಲ್ಟಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications