ಚಿಕ್ಕಮಗಳೂರು: ಚಕ್ರಕ್ಕೆ ನಟ್‌ಗಳೇ ಇಲ್ಲದ ಸಾರಿಗೆ (KSRTC) ಬಸ್ ಇದು, ಪ್ರಯಾಣಿಕರು ಹೇಳೋದೇನು?
ಚಿಕ್ಕಮಗಳೂರು, ಅಕ್ಟೋಬರ್, 17: ಚಿಕ್ಕಮಗಳೂರು-ಆಲ್ದೂರು ಮಾರ್ಗದ ಮಾರ್ಗದಲ್ಲಿ ಸಂಚರಿಸುವ ಸಾರಿಗೆ (KSRTC) ಬಸ್‌ನ ಚಕ್ರಕ್ಕೆ ನಟ್‌ಗಳೇ ಇಲ್ಲದಂತಾಗಿದ್ದು, ಇದು ಸಾರಿಗೆ ಇಲಾಖೆಯ ಬೇಜವಾಬ್ದಾರಿ ಎತ್ತಿ ತೋರಿಸಿದಂತಿದೆ.
ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಸಾರಿಗೆ ಬಸ್‌ನ ಚಕ್ರದಲ್ಲಿ 8 ನಟ್ ಬದಲಿಗೆ ಬರೀ 3 ನಟ್‌ಗಳಷ್ಟೇ ಇದ್ದು, ಚಾಲಕರು ಅದೇ ಸ್ಥಿತಿಯಲ್ಲಿ ಬಸ್ಸನ್ನು ಓಡಿಸುತ್ತಿದ್ದಾರೆ. ಇದರಲ್ಲೇ ಪ್ರಯಾಣಿಕರು ಪ್ರತಿನಿತ್ಯ ಜೀವವನ್ನು ಕೈಯಲ್ಲಿ ಹಿಡಿದು ಪ್ರಯಾಣ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಈ ಬಸ್‌ನಲ್ಲಿ ನಿತ್ಯ ನೂರುರು ಮಕ್ಕಳು ಶಾಲಾ-ಕಾಲೇಜಿಗೆ ಓಡಾಡುತ್ತಿರುತ್ತಾರೆ. ಆದ್ದರಿಂದ ಇದಕ್ಕೆ ಸಬಂಧಪಟ್ಟ ಅಧಿಕಾರಿಗಳು ಮುಂದೆ ಯಾವುದೇ ಅನಾಹುತಗಳು ಆಗದಂತೆ ಈಗಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸಾರಿಗೆ ಬಸ್
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ (KSRTC) ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಆಗುಂದ ಗ್ರಾಮದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಆಗುಂದ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದು, ಈ ವೇಳೆ ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಭಾರೀ ಅನಾಹುತ ತಪ್ಪಿದೆ. ಸದ್ಯ ಅರಸೀಕೆಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ
ಮತ್ತೊಂದೆಡೆ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿತ್ತು
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications