ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ.ಟಿ. ರವಿ ನೇಮಕ

ಚಿಕ್ಕಮಗಳೂರು, ಆಗಸ್ಟ್ 12: ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ.ಟಿ. ರವಿ ಅವರನ್ನು ನೇಮಿಸಲಾಗಿದೆ ಎಂದು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ರಾಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಮಾಜಿ ಸಚಿವ ಸಿ.ಟಿ. ರವಿ ಪತ್ನಿ ಪಲ್ಲವಿ ಕೂಡ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ.

ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿಯವರನ್ನು ಬಿಜೆಪಿ ರಾಷ್ಟ್ರಮಟ್ಟದ ಬಿಜೆಪಿ ಸಂಘಟನೆಯಲ್ಲಿ ಬಳಸಿಕೊಳ್ಳುತ್ತಿದೆ.

Pallavi CT Ravi Appointed As Vice President Of Chikkamagaluru BJP Mahila Morcha

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರು. ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದಿರುವ ಅವರನ್ನು ಸರ್ಕಾರಕ್ಕಿಂತ ಪಕ್ಷದ ಸಂಘಟನೆಯಲ್ಲಿ ತೊಡಗುವುದು ಸೂಕ್ತ ಎಂದು ಬಿಜೆಪಿ ಹೈಕಮಾಂಡ್ ಯೋಜಿಸಿತ್ತು.

ನಂತರ ಪಂಚರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಯಿತು. ತಮಿಳುನಾಡಿನಲ್ಲಿಯೂ ಓಡಾಡಿ ಪಕ್ಷ ಸಂಘಟನೆಗೆ ಪ್ರಯತ್ನಿಸಿದರು.

ಈಗ ಸಿ.ಟಿ. ರವಿ ಪತ್ನಿ ಪಲ್ಲವಿ ಕೂಡ ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಭಾರೀ ಕುತೂಹಲ ಮೂಡಿಸಿದೆ.

Pallavi CT Ravi Appointed As Vice President Of Chikkamagaluru BJP Mahila Morcha

ಸಿ.ಟಿ. ರವಿ ಸದ್ಯ ರಾಷ್ಟ್ರ ರಾಜಕಾರಣದಲ್ಲಿದ್ದು, ಅಲ್ಲಿಯೇ ಮುಂದುವರೆದರೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗಮನ ಹರಿಸಲಾಗುವುದಿಲ್ಲ. ಹೀಗಾಗಿ ಪತ್ನಿಯನ್ನು ರಾಜಕೀಯಕ್ಕೆ ಕರೆತರಲಾಗಿದೆ ಎನ್ನಲಾಗುತ್ತಿದೆ.

Recommended Video

      ಧೋನಿ- ವಿಜಯ್ ಭೇಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ! | Oneindia Kannada

      ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಪತ್ನಿ ಪಲ್ಲವಿಯನ್ನು ಕಣಕ್ಕಿಳಿಸುವ ಯೋಜನೆ ಇದಾಗಿದೆ ಎಂದು ಬಿಜೆಪಿಯ ಮೂಲಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+