ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್ ವಾಹನ ಸವಾರರ ಗಮನಕ್ಕೆ

|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 12: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರ ಗಮನಕ್ಕೆ. ಗ್ರಾಮ ಪಂಚಾಯಿತಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ, ಕ್ರಿಮಿನಲ್ ಪ್ರಕರಣ ಸಹ ದಾಖಲಾಗಲಿದೆ.

ಹೌದು, ಚಾರ್ಮಾಡಿ ಗ್ರಾಮ ಪಂಚಾಯಿತಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಸವನ್ನು ಹಾಕುವ ವಾಹನ ಸವಾರರಿಗೆ ದಂಡ ಹಾಕಲು ತೀರ್ಮಾನಿಸಿದೆ. ಫೆಬ್ರವರಿ 15ರಿಂದ ಈ ನಿಯಮ ಜಾರಿಗೆ ಬರಲಿದೆ.

ಆಗುಂಬೆ ಘಾಟ್‌ನಲ್ಲಿ ಪ್ರಾಣಿಗಳಿಗೆ ಆಹಾರ ಕೊಟ್ಟರೆ ದಂಡ! ಆಗುಂಬೆ ಘಾಟ್‌ನಲ್ಲಿ ಪ್ರಾಣಿಗಳಿಗೆ ಆಹಾರ ಕೊಟ್ಟರೆ ದಂಡ!

ಚಾರ್ಮಾಡಿ ಗ್ರಾಮ ಪಂಚಾಯಿತಿ ಪಿಡಿಒ ಪ್ರಕಾಶ್ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. "ರಸ್ತೆ ಬದಿ ಕಸ ಸುರಿಯುವವರಿಗೆ ದಂಡ ಹಾಕುವುದು ಮಾತ್ರವಲ್ಲ, ಕ್ರಿಮಿನಲ್ ಕೇಸು ಸಹ ದಾಖಲಿಸುತ್ತೇವೆ" ಎಂದು ಹೇಳಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆ ಉಳಿಸಿ, ಅಭಿವೃದ್ಧಿಪಡಿಸಿ: ಯುವಕರ ಅಭಿಯಾನಚಾರ್ಮಾಡಿ ಘಾಟ್ ರಸ್ತೆ ಉಳಿಸಿ, ಅಭಿವೃದ್ಧಿಪಡಿಸಿ: ಯುವಕರ ಅಭಿಯಾನ

Pay Fine If Dump Garbage In Charmadi Ghat Road

ಉಜಿರೆಯಿಂದ ಆಗಮಿಸಿದ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆಯುತ್ತಿದ್ದರು. ಆಗ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ಹಿಡಿದು 500 ರೂ. ದಂಡವನ್ನು ಹಾಕಿದ್ದಾರೆ.

ನಿಷೇಧವಿದ್ದರೂ ಚಾರ್ಮಾಡಿ ಘಾಟ್ ನಲ್ಲಿ ಪ್ರಿ ವೆಡ್ಡಿಂಗ್ ಶೂಟ್, ಆಕ್ರೋಶನಿಷೇಧವಿದ್ದರೂ ಚಾರ್ಮಾಡಿ ಘಾಟ್ ನಲ್ಲಿ ಪ್ರಿ ವೆಡ್ಡಿಂಗ್ ಶೂಟ್, ಆಕ್ರೋಶ

ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಜನರು ಸೇರಿ ಎಲ್ಲೆಂದರಲ್ಲಿ ಕಸ ಹಾಕದಂತೆ ಅರಿವು ಮೂಡಿಸುತ್ತಿದ್ದಾರೆ. ಇದನ್ನು ಮೀರಿಯೂ ಪ್ರವಾಸಿಗರು ಕಸ ಹಾಕಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಹೇಳಿದೆ.

Recommended Video

ಬೆಂಗಳೂರು: ಅಬ್ಬಬ್ಬಾ.. ಬೆಂಗಳೂರಿನಲ್ಲಿ ಚಳಿಯೋ.. ಚಳಿ...! | Oneindia Kannada

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಸ ಸುರಿಯಬೇಡಿ ಎಂದು ಮೈಕ್‌ನಲ್ಲಿ ಹೇಳುವ ಮೂಲಕ ಗ್ರಾಮ ಪಂಚಾಯಿತಿ ಈಗಾಗಲೇ ಮಾಹಿತಿ ನೀಡುತ್ತಿದೆ. ನಿಗದಿಪಡಿಸಿದ ಸ್ಥಳದಲ್ಲಿ ಸಿಸಿಟಿವಿಯನ್ನು ಸಹ ಅಳವಡಿಕೆ ಮಾಡಲು ತೀರ್ಮಾನಿಸಲಾಗಿದೆ.

English summary
Charmadi Gram Panchayat will impose fine for the people who dump garbage in Charmadi Ghat road from February 15, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X