ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳು: ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಚಿಕ್ಕಮಗಳೂರು, ಡಿಸೆಂಬರ್, 02: ರಾಜ್ಯ ರಾಜಕೀಯದಲ್ಲಿ ವಿಧಾನಸಭೆಗೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಮೂರು ಪಕ್ಷಗಳಿಂದಲೂ ಚುನಾವಣೆಗೆ ಸಕಲ ತಯಾರಿಗಳು ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ಎಚ್ಚೆತ್ತುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಂದಾಗುತ್ತಿದ್ದಾರೆ. ಆದರೆ ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಮಾಡದ ಹಿನ್ನೆಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಕೂಗು ಎದ್ದಿದೆ.
ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಲ್ಲಿ 2023ರ ಎಂಎಲ್‌ಎ ಚುನಾವಣೆಯ ಮೊದಲ ಮತದಾನ ಬಹಿಷ್ಕಾರದ ಕೂಗು ಎದ್ದಿದೆ. ರಸ್ತೆ ದುರಸ್ತಿ ಮಾಡದ ಸರ್ಕಾದ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಹಾಗಯೇ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಗ್ರಾಮದಲ್ಲಿ ಸಂಪೂರ್ಣ ಕುಸಿಯುವ ಹಂತ ತಲುಪಿರುವ ರಸ್ತೆಯಲ್ಲಿ ಪ್ರತಿನಿತ್ಯ 450ಕ್ಕೂ ಅಧಿಕ ಜನ ಓಡಾಡುತ್ತಲೇ ಇರುತ್ತಾರೆ. ಈ ರಸ್ತೆರನ್ನು ಇದುವರೆಗೂ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.
ಬಿಜೆಪಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ಹಾಗೇ ಅನೇಕ ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ವಿರುದ್ಧ ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದರು. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ನಾನು ರಾಜಕೀಯ ಪ್ರೇರಿತ ದ್ವೇಷದಿಂದಾಗಿ ಜೈಲಿಗೆ ಹೋಗಿದ್ದೇನೆ, ವಿನಃ ಯಾವುದೇ ಭ್ರಷ್ಟಾಚಾರ ಮಾಡಿ ಹೋಗಿಲ್ಲ. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ಅದನ್ನು ಸರಿಮಾಡಿಕೊಳ್ಳಲಿ ಎಂದಿದ್ದರು. ತಿಹಾರ್ ಜೈಲಿ ಹೋಗಿ ಬಂದವರು ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಬಡ್ತಿ ಪಡೆದಿದ್ದಾರೆ ಎನ್ನುವ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ರಾಜಕೀಯ ದ್ವೇಷದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಭ್ರಷ್ಟಾಚಾರ ಮಾಡಿ ಅಲ್ಲ ಎಂದು ಕಿಡಿಕಾರಿದ್ದರು.

ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ
ಹೀಗೆಯೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಕೆಸೆರೆರಚಾಟಗಳು ಶುರುವಾಗಿವೆ. ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡುತ್ತಾ ಜನರ ಅಭಿವೃದ್ಧಿ ಕಾರ್ಯಗಳನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮಾಡದ ಹಿನ್ನೆಲೆ ಜನರು ಎಚ್ಚೆತ್ತುಕೊಳ್ಳುತ್ತಿದ್ದು, ಮತದಾನವನ್ನೇ ಬಹಿಷ್ಕರಿಸಲು ಮುಂದಾಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications