ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳು: ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್‌, 02: ರಾಜ್ಯ ರಾಜಕೀಯದಲ್ಲಿ ವಿಧಾನಸಭೆಗೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಮೂರು ಪಕ್ಷಗಳಿಂದಲೂ ಚುನಾವಣೆಗೆ ಸಕಲ ತಯಾರಿಗಳು ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ಎಚ್ಚೆತ್ತುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಂದಾಗುತ್ತಿದ್ದಾರೆ. ಆದರೆ ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಮಾಡದ ಹಿನ್ನೆಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಕೂಗು ಎದ್ದಿದೆ.

ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಲ್ಲಿ 2023ರ ಎಂಎಲ್‌ಎ ಚುನಾವಣೆಯ ಮೊದಲ ಮತದಾನ ಬಹಿಷ್ಕಾರದ ಕೂಗು ಎದ್ದಿದೆ. ರಸ್ತೆ ದುರಸ್ತಿ ಮಾಡದ ಸರ್ಕಾದ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಹಾಗಯೇ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಗ್ರಾಮದಲ್ಲಿ ಸಂಪೂರ್ಣ ಕುಸಿಯುವ ಹಂತ ತಲುಪಿರುವ ರಸ್ತೆಯಲ್ಲಿ ಪ್ರತಿನಿತ್ಯ 450ಕ್ಕೂ ಅಧಿಕ ಜನ ಓಡಾಡುತ್ತಲೇ ಇರುತ್ತಾರೆ. ಈ ರಸ್ತೆರನ್ನು ಇದುವರೆಗೂ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಮತ್ತೆ ದೂರುಅಕ್ರಮ ಆಸ್ತಿ ಗಳಿಕೆ ಆರೋಪ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಮತ್ತೆ ದೂರು

ಬಿಜೆಪಿಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ಹಾಗೇ ಅನೇಕ ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ವಿರುದ್ಧ ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಕಿಡಿಕಾರಿದ್ದರು. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ನಾನು ರಾಜಕೀಯ ಪ್ರೇರಿತ ದ್ವೇಷದಿಂದಾಗಿ ಜೈಲಿಗೆ ಹೋಗಿದ್ದೇನೆ, ವಿನಃ ಯಾವುದೇ ಭ್ರಷ್ಟಾಚಾರ ಮಾಡಿ ಹೋಗಿಲ್ಲ. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ಅದನ್ನು ಸರಿಮಾಡಿಕೊಳ್ಳಲಿ ಎಂದಿದ್ದರು. ತಿಹಾರ್ ಜೈಲಿ ಹೋಗಿ ಬಂದವರು ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಬಡ್ತಿ ಪಡೆದಿದ್ದಾರೆ ಎನ್ನುವ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್‌, ರಾಜಕೀಯ ದ್ವೇಷದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಭ್ರಷ್ಟಾಚಾರ ಮಾಡಿ ಅಲ್ಲ ಎಂದು ಕಿಡಿಕಾರಿದ್ದರು.

People representatives who do not repair roads: Warn of voting boycott by Hadugaru villagers

ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ

ಹೀಗೆಯೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಕೆಸೆರೆರಚಾಟಗಳು ಶುರುವಾಗಿವೆ. ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡುತ್ತಾ ಜನರ ಅಭಿವೃದ್ಧಿ ಕಾರ್ಯಗಳನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮಾಡದ ಹಿನ್ನೆಲೆ ಜನರು ಎಚ್ಚೆತ್ತುಕೊಳ್ಳುತ್ತಿದ್ದು, ಮತದಾನವನ್ನೇ ಬಹಿಷ್ಕರಿಸಲು ಮುಂದಾಗಿದ್ದಾರೆ.

ಮೂಡಿಗೆರೆ; ಕುಂದೂರಿನ ಕೆಂಜಿಗೆ ಬಳಿ ಮೊದಲ ದಿನವೇ ಒಂದು ಕಾಡಾನೆ ಸೆರೆಮೂಡಿಗೆರೆ; ಕುಂದೂರಿನ ಕೆಂಜಿಗೆ ಬಳಿ ಮೊದಲ ದಿನವೇ ಒಂದು ಕಾಡಾನೆ ಸೆರೆ

English summary
Due to do not repair of damaged roads, Hadugaru villagers of Koppa taluk decided to boycott voting. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X