ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು
ಚಿಕ್ಕಮಗಳೂರು, ಜೂನ್ 21: ಕರ್ನಾಟಕ, ಕೇರಳ, ಆಂಧ್ರ ಸೇರಿದಂತೆ ವಿವಿಧೆಡೆ ಕಳ್ಳತನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಡೂರು ಮೂಲದ ಮಹಮದ್ ಖಾಲಿದ್ ಬಂಧಿತ ವ್ಯಕ್ತಿ. ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹದಿನೇಳು ಕಡೆಗಳಲ್ಲಿ ಕಳ್ಳತನದಲ್ಲಿ ಭಾಗಿಯಾಗಿದ್ದ ಈತ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನಿಂದ 23,80,000 ಮೌಲ್ಯದ ಚಿನ್ನಾಭರಣವನ್ನು, ಕೃತ್ಯಕ್ಕೆ ಬಳಸಿದ್ದ 5 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಈ ಹಿಂದೆ ಕೇರಳದ ಕಾಸರಗೋಡಿನಲ್ಲಿ ಶ್ರೀಗಂಧದ ಕಳುವು ಹಾಗೂ ರಕ್ತಚಂದನದ ಕಳವು ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಇನ್ನು ಹಲವೆಡೆ ಕಳ್ಳತನ ಮಾಡಿ ಮೈಸೂರಿನಲ್ಲಿ 9 ವರ್ಷ ಜೈಲಿನಲ್ಲಿದ್ದ. ಏಳು ತಿಂಗಳ ಹಿಂದಷ್ಟೇ ಜೈಲಿನಿಂತ ಈತನನ್ನು ಬಿಡುಗಡೆಗೊಳಿಸಲಾಗಿತ್ತು. ಬಿಡುಗಡೆ ನಂತರವೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡಿರುವ ಪೊಲೀಸರು, ಹುಡುಕಾಟ ಮುಂದುವರೆಸಿದ್ದಾರೆ.












Click it and Unblock the Notifications