ಮತ್ತಾವರ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪೊಲೀಸ್ ಜೀಪ್
ಚಿಕ್ಕಮಗಳೂರು, ಜುಲೈ 6: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪೊಂದು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಮತ್ತಾವರ ಬಳಿ ನಡೆದಿದೆ.
ಜೀಪ್ ನಲ್ಲಿ ಸಿಪಿಐ ರಘು ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಇದ್ದರು. ಅವರು ಗಾಯಗೊಂಡಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications