ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಸಿಗರಲ್ಲಿ ಚಿಕ್ಕಮಗಳೂರು ಪೊಲೀಸರ ವಿನಂತಿ

|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 02; ಕೋವಿಡ್ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಮ್ಮ ಮತ್ತು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ & ಜಿಲ್ಲೆಯ ಪಸ್ತುತ ಪರಿಸ್ಥಿತಿಯನ್ನು ಅರಿತು ಜಿಲ್ಲೆಗೆ ಪ್ರವಾಸ ಕೈಗೊಳ್ಳುವುದನ್ನು ಕೈಬಿಡಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಪ್ರವಾಸಿರಲ್ಲಿ ವಿನಂತಿ ಮಾಡಿದ್ದಾರೆ.

ಕೊರೊನಾ ಸೋಂಕಿನ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚುತ್ತಿವೆ. ಸೋಂಕು ಹರಡುವಿಕೆ ನಿಯಂತ್ರಿಸಲು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂಚಿತವಾಗಿಯೇ ಪ್ರವಾಸದ ವೇಳೆ ನಿಗದಿ ಮಾಡಿಕೊಂಡಿದ್ದಲ್ಲಿ 72 ಗಂಟೆ ಮೊದಲಿನ RTPCR ನೆಗೆಟಿವ್ ವರದಿಯೊಂದಿಗೆ ವೈಯಕ್ತಿಕ ಜವಾಬ್ದಾರಿ ಮೇರೆಗೆ ಆಗಮಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ.

ವಿಡಿಯೋ; ಚಿಕ್ಕಮಗಳೂರು ನಗರಕ್ಕೆ ನುಗ್ಗಿದ ಒಂಟಿ ಸಲಗ ವಿಡಿಯೋ; ಚಿಕ್ಕಮಗಳೂರು ನಗರಕ್ಕೆ ನುಗ್ಗಿದ ಒಂಟಿ ಸಲಗ

ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿಗರನ್ನು ಆಕರ್ಷಿಸುವ ತಾಣಗಳನ್ನು ಹೊಂದಿದ್ದು, ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದಲೂ ಜಿಲ್ಲೆಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಸರ್ಕಾರಿ ಬಸ್‌ನಲ್ಲಿ ಚಿತ್ರದುರ್ಗ-ಜೋಗ ಪ್ರವಾಸ; ದರಪಟ್ಟಿ ಸರ್ಕಾರಿ ಬಸ್‌ನಲ್ಲಿ ಚಿತ್ರದುರ್ಗ-ಜೋಗ ಪ್ರವಾಸ; ದರಪಟ್ಟಿ

Postpone Tour To Chikkamagaluru Police Request To Tourist

ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವ ಸಾಧ್ಯತೆ ಇದೆ. ಹೆಚ್ಚಿನ ಪ್ರವಾಸಿಗರು ಆಗಮನದಿಂದಾಗಿ ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ಸಂಬಂಧಿಸಿದ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವುದು ಅಗತ್ಯ ಮತ್ತು ಅನಿವಾರ್ಯವಾಗಿರುತ್ತದೆ.

3 ಪ್ರವಾಸಿ ಪ್ಯಾಕೇಜ್ ಘೋಷಿಸಿದ ಕೆಎಸ್‌ಆರ್‌ಟಿಸಿ; ವಿವರಗಳು 3 ಪ್ರವಾಸಿ ಪ್ಯಾಕೇಜ್ ಘೋಷಿಸಿದ ಕೆಎಸ್‌ಆರ್‌ಟಿಸಿ; ವಿವರಗಳು

ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲೆಯ ಸಮಗ್ರ ಪರಿಸ್ಥಿತಿಯನ್ನು ಅರಿತು ಪ್ರವಾಸಿಗರ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೆಳಕಂಡ ಅಂಶಗಳನ್ನು ಪ್ರವಾಸಿಗರ ಗಮನಕ್ಕೆ ತರಲಾಗಿದೆ.

ಮುಂಚಿತವಾಗಿಯೇ ಪ್ರವಾಸದ ವೇಳೆ ನಿಗದಿ ಮಾಡಿಕೊಂಡಿದ್ದಲ್ಲಿ 72 ಗಂಟೆ ಪೂರ್ವದ RTPCR ನೆಗೆಟಿವ್ ವರದಿಯೊಂದಿಗೆ ವೈಯಕ್ತಿಕ ಜವಾಬ್ದಾರಿ ಮೇರೆಗೆ ಆಗಮಿಸಬಹುದು.

* ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಪ್ರವಾಸಿ ತಾಣಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ.

* ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

* ಕೋವಿಡ್ ಸೋಂಕಿನ ಪ್ರಕರಣಗಳು ಪ್ರವಾಸಿಗರಲ್ಲಿ ಪತ್ತೆಯಾದಲ್ಲಿ ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ ನೀಡುವುದು ಕಷ್ಟವಾಗಲಿದೆ.

* ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶವಾಗಿದ್ದು, ಪ್ರಸ್ತುತ ನಿರಂತರವಾಗಿ ಮಳೆಯಾಗುತ್ತಿದೆ.

* ಪ್ರಸ್ತುತ ಸನ್ನಿವೇಶದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಸೂಕ್ತವೆನಿಸುವುದಿಲ್ಲ.

ಈ ಹಿನ್ನಲೆಯಲ್ಲಿ ಪ್ರವಾಸಿಗರಲ್ಲಿ ವಿನಂತಿ ಮಾಡುವುದು ಏನೆಂದರೆ ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರು ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ಪ್ರವಾಸವನ್ನು ಮೊಟುಕುಗೊಳಿಸಿ ತಮ್ಮ ಸ್ಥಳದಲ್ಲಿಯೇ ಉಳಿದುಕೊಂಡು ಪರಿಸ್ಥಿತಿ ತಿಳಿಗೊಂಡ ನಂತರದಲ್ಲಿ ಪ್ರವಾಸ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಒಂದು ವೇಳೆ ಪ್ರವಾಸಿಗರು ಮುಂಚಿತವಾಗಿ ಪ್ರವಾಸ ನಿಗದಿ ಮಾಡಿದ್ದಲ್ಲಿ, ವಾಸ್ತವ್ಯಕ್ಕಾಗಿ ಸ್ಥಳ ಕಾಯ್ದಿರಿಸಿದ್ದಲ್ಲಿ 72 ಗಂಟೆಗಳ ಮೊದಲಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ವೈಯಕ್ತಿಕ ಜವಾಬ್ದಾರಿ ಮೇಲೆ ಆಗಮಿಸಬಹುದು ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

ಪರಿಸ್ಥಿತಿಯನ್ನು ಅರಿತು ಜಿಲ್ಲೆಗೆ ಪ್ರವಾಸ ಕೈಗೊಳ್ಳುವುದನ್ನು ಪ್ರಸ್ತುತ ಕೈಬಿಟ್ಟು ಜಿಲ್ಲಾಡಳಿತ ಜೊತೆಗೆ ಸಹಕಾರ ನೀಡಬೇಕು ಎಂದು ಮನವಿಯನ್ನು ಮಾಡಲಾಗಿದೆ.

5 ಚೆಕ್ ಪೋಸ್ಟ್ ಸ್ಥಾಪನೆ; ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ಚೆಕ್‌ಪೋಸ್ಟ್‌ಗಳನ್ನು ಈಗಾಗಲೇ ತೆರೆಯಲಾಗಿದೆ. ಹೊರರಾಜ್ಯಗಳಿಂದ ಬರುವ ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.

"ಹೊರ ರಾಜ್ಯದ ಪ್ರವಾಸಿಗರಿಗೆ ಆರ್‌ಟಿಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎಚ್. ಅಕ್ಷಯ್ ಹೇಳಿದ್ದಾರೆ.

ಭಾನುವಾರದ ವರದಿಯಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 65 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 48403. 873 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇದುವರೆಗೂ 376 ಜನರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.

Recommended Video

ಚೀನಾ vs ಅಮೆರಿಕ ಗೆಲುವು ಯಾರಿಗೆ? | Oneindia Kannada

ಚಿಕ್ಕಮಗಳೂರು ಸುತ್ತಮುತ್ತಲಿನ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಜನರು ಜಿಲ್ಲೆಯ ಪ್ರವಾಸವನ್ನು ಕೈಬಿಡಬೇಕು ಎಂದು ಜಿಲ್ಲಾಡಳಿತ ಮನವಿಯನ್ನು ಮಾಡಿದೆ.

English summary
Chikkamagaluru police request the tourist to postpone district tourist place due to Covid situation. If your tour in already scheduled come with 72 hours before RTPCT test report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X