Power Cut: ಈ ಭಾಗಗಳಲ್ಲಿ ಅಕ್ಟೋಬರ್‌ 12ರ ಭಾನುವಾರ ವಿದ್ಯುತ್ ವ್ಯತ್ಯಯ

Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ಹಾಗೂ ಮಳೆಯಾಗುವಂತಹ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್‌ 12ರ ಭಾನುವಾರ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೀಗ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಅದರಲ್ಲೂ ಕಾಫಿನಾಡು ಅಂತಲೇ ಪ್ರಸಿದ್ಧಿಯಾಗಿರುವ ಚಿಕ್ಕಮಗಳೂರಿನಲ್ಲಿ ಕಳೆದ ಹಲವು ದಿನಗಳಿಂದಲೂ ಭಾರೀ ಮಳೆ ಮುಂದುವರೆದಿತ್ತು. ಈ ನಡುವೆಯೇ ಜಕ್ಕನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಬೋರ್ ವೆಲ್ ಕೊರೆಸುವ ಕೆಲಸ ಕೈಗೊಳ್ಳುವ ಹಿನ್ನೆಲೆ ಇಲ್ಲಿನ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಅಕ್ಟೋಬರ್ 12ರ ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Power Cut in chikkamagaluru district s These Areas on October 11 Know details

ಚಿಕ್ಕಮಗಳೂರು ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ತಳಿಹಳ್ಳ ಗ್ರಾಮ ಪಂಚಾಯಿತಿ ಜಕ್ಕನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಕುಡಿಯುವ ನೀರಿನ ಬೋರ್‌ವೆಲ್‌ ಕೊರೆಸುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಚಿಕ್ಕಮಗಳೂರು ವಿದ್ಯುತ್ ಉಪಕೇಂದ್ರದಿಂದ 11 ಕೆ.ವಿ. ಶಿರವಾಸೆ, ವಿಜಯಪುರ ಫೀಡರ್‌ವರೆಗೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ವ್ಯಾಪ್ತಿಗೆ ಬರುವ ಜಕ್ಕನಹಳ್ಳಿ, ಮಲ್ಲಂದೂರು, ಆವತಿ, ಮಸಗಲಿ, ದಾನಿಹಳ್ಳಿ, ಶಿವಗಂಗೆ, ಸಂತೆಗುಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಮನವಿ ಮಾಡಿದ್ದಾರೆ. ಇನ್ನೂ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯಾತ್ಯಯ ಉಂಟಾಗಲಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊಬೈಲ್‌ ಫೋನ್‌, ಬ್ಯಾಟರಿ, ಲ್ಯಾಪ್‌ಟಾಪ್‌ ಸೇರಿದಂತೆ ಇನ್ನಿತರೆ ಚಾರ್ಜಿಂಗ್‌ ಸಾಧನಗಳನ್ನು ಚಾರ್ಜ್‌ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+