Get Updates
Get notified of breaking news, exclusive insights, and must-see stories!

Power Cut: ಚಿಕ್ಕಮಗಳೂರಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಸೆಪ್ಟೆಂಬರ್ 24: ಚಿಕ್ಕಮಗಳೂರಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದರಿ ಫೀಡರ್‌ಗಳ ವ್ಯಾಪ್ತಿಗೆ ಬರುವ ಕೆಲ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ಬಂದ್ ಮಾಡಲಾಗಿದೆ.

ಗ್ರಾಮೀಣ ಉಪವಿಭಾಗದ 66/11 ಕೆವಿ ಕಳಸಾಪುರ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ 66/11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸದರಿ ಫೀಡರ್‌ಗಳ ವ್ಯಾಪ್ತಿಗೆ ಬರುವ ಕಳಸಾಪುರ, ಕುನ್ನಾಳು, ಕಣಿವೆಹಳ್ಳಿ, ಗಾಳಿಹಳ್ಳಿ, ದೇವಗೊಂಡನಹಳ್ಳಿ, ಬೆಳವಾಡಿ, ಈಶ್ವರಹಳ್ಳಿ, ಸಿಂದಿಗೆರೆ, ಮಾಚೇನಹಳ್ಳಿ ಮತ್ತು ಕೆಬಿ ಹಾಳ್ ಗ್ರಾಮಗಳ ಸುತ್ತ ಮುತ್ತಲಿನ ಪ್ರದೇಶಗಳಿಗೆ ಇಂದು (ಸೆಪ್ಟೆಂಬರ್ 24) ಬೆಳಿಗ್ಗೆ 10.00 ಗಂಟೆಯಿಂದ 05.00 ಗಂಟೆವರೆಗೆ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ.

Power Cut Power failure in many rural areas of Chikkamagaluru

ಇಡೀ ದಿನ ವಿದ್ಯುತ್ ನಿಲುಗಡೆಯಾಗುವ ಕಾರಣ ರೈತರಿಗೆ, ಕಾರ್ಖಾನೆಗಳಿಗೆ ಅನುಕೂಲವಂತೆ ಬೆಳಿಗ್ಗೆ 5 ರಿಂದ 10 ರವರೆಗೆ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮೆಸ್ಕಾಂ ಗ್ರಾಮೀಣ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಫಿನಾಡಲ್ಲಿ ಮುಂದುವರೆದ ಕಾಡಾನೆ ದಾಳಿ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿಮೀರಿ ಹೋಗಿದೆ ಮೂಡಿಗೆರೆ ತಾಲೂಕಿನ ಕೆಳಗೂರು ಸಮೀಪದ ಮೇಗೂರು ಟೀ ಎಸ್ಟೇಟ್ ನ ಕಾರ್ಮಿಕರ ಮನೆಗಳ ಸಮೀಪ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಕಾಫಿ ಬಾಳೆ ಗಿಡಗಳನ್ನು ನಾಶಪಡಿಸಿರುವ ಪುಂಡಾನೆ ಕಾರ್ಮಿಕರ ನಿವಾಸ ಸುತ್ತಲೂ ಓಡಾಡಿ ಗೀಳಿಟ್ಟಿದೆ ಇದರಿಂದ ಕಾರ್ಮಿಕರಲ್ಲರೂ ಭಯಭೀತರಾಗಿದ್ದಾರೆ. ಚಾರ್ಮಾಡಿ ಘಾಟ್, ಬಿದಿರುತಳ, ಅಲೆಖಾನ್, ಮಲೆಮನೆ ಗ್ರಾಮಗಳಲ್ಲಿ ಇದೆ ಆನೆ ಪುಂಡಾಟ ನಡೆಸುತ್ತಿದ್ದು ಇದನ್ನು ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ

ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಚಿಕಲ್ ಗೇಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲೇಶ್(60) ಮಲ್ಲೇಶ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರಿಗೆ ಗಾಯಗಳಾಗಿದ್ದು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಂಚನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Power Cut Power failure in many rural areas of Chikkamagaluru

ಹಲ್ಲೆ ಪ್ರಕರಣದ ಆರೋಪಿಗೆ 6 ವರ್ಷ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದಲ್ಲಿ 10.06.2019 ರಂದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಚಿನ್ ಎಂಬಾತ ವ್ಯಕ್ತಿಯೊಬ್ಬರನ್ನು ಕೊಲೆ ಮಾಡುವ ಉದ್ದೇಶದಿಂದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಕುರಿತು ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿ ಸಚಿನ್ ಗೆ 6 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ.

ಚಾಲಕ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ಮೂಡಿಗೆರೆ: ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಗ್ಗಸಗೋಡು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದವರು ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ತಡೆಗೋಡೆ ಇಲ್ಲದಿರುವುದರಿಂದ ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+