Hassan Pendrive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧಿಸಿದ ಪೊಲೀಸರು
ಬೆಂಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಜ್ವಲ್ ಬಂಧನವಾಗಿದೆ.
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ತಂದೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗ ವಶಕ್ಕೂ ಪಡೆಯಲಾಗಿದೆ. ಇದರ ಬೆನ್ನಲ್ಲೆ ಮೂಡಿಗೆರೆಯಲ್ಲಿ ಪೋಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುರಿತಾದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜಕೀಯ ಆರೋಪ, ಪ್ರತ್ಯಾರೋಪಗಳು ನಡೆದಿದ್ದವು. ಇದರ ಬೆನ್ನಲ್ಲೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಮಾಧ್ಯಮಗಳು ವಿಡಿಯೋ ಪ್ರಸಾರ, ಸಾಮಾಜಿಕ ಬಳಕೆದಾರರು ವಿಡಿಯೋ ಹಂಚಿಕೆ, ವಿಡಿಯೋ ಶೇರ್ ಮಾಡದಂತೆ ಸೂಚನೆ ನೀಡಿತ್ತು.
ಕಾನೂನು ಕ್ರಮ ಎಂದಿದ್ದ ಎಸ್‌ಐಟಿ
ಹಾಗೇನಾದರು ಮಾಡಿದಲ್ಲಿ ಇದು ಐಟಿ ಕಾಯ್ದೆಯ ಉಲ್ಲಂಘನೆ ಆಗಲಿದ್ದು, ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದರು. ವಿಡಿಯೋ ಶೇರ್‌ನಿಂದ ತಮ್ಮ ತಪ್ಪಿಲ್ಲದಿದ್ದರೂ ಪ್ರಕರಣ ಸಂತ್ರಸ್ತ ನೂರಾರು ಹೆಣ್ಣುಮಕ್ಕಳ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿತ್ತು. ಇಂತಹ ವಿಡಿಯೋ ಮೊಬೈಲ್ ನಲ್ಲಿ ಇಟ್ಟುಕೊಳ್ಳುವುದು ಅಪರಾಧ ಅಂತಲೂ ಎಸ್‌ಐಟಿ ತಿಳಿಸಿತ್ತು.
ಇದೀಗ ಈ ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿರುವ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಈ ಆರೋಪಿ ಪಜ್ವಲ್ ಸಂಸದ ಪ್ರಜ್ವಲ್ ರೇವಣ್ಣ ಅವರ 'ಅಶ್ಲೀಲ ವಿಡಿಯೋಗಳು' ಎಂದು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.
ಇದೇ ಕಾರಣಕ್ಕಾಗಿ ಕುದುರೆಮುಖ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಎಲ್ಲ ಪೇಜ್‌ಗಳ ಆಡ್ಮಿನ್ ಆಗಿ ಈ ಬಂಧಿತ ಆರೋಪಿ ಪ್ರಜ್ವಲ್ ನಿಭಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.
ಇತ್ತ ಬಿಜೆಪಿಯು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟು ಹಿಡಿದಿದೆ. ಇದಕ್ಕೆ ರಾಜ್ಯ ಸರ್ಕಾರವು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ರಾಜ್ಯದ ಪೊಲೀಸರು ಸಮರ್ಥರಿದ್ದಾರೆ. ಅವರೇ ಈ ತನಿಖೆಯನ್ನು ನಡೆಸಲಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ ಹಂಚಿಕೆ ಮಾಡಿದ್ದ ಬಿಜೆಪಿ ನಾಯಕ ಜಿ.ದೇವರಾಜೇಗೌಡ ಅವರನ್ನು ಹಿರಿಯೂರಲ್ಲಿ ಸ್ಥಳೀಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ನೀಡಿದ್ದರು. ದೇವರಾಜೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಸದ್ಯ ಚುನಾವಣೆ ಮುಗಿದಿದ್ದು, ಜರ್ಮನಿಗೆ ಪಲಾಯನ ಮಾಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಇಂದೋ ನಾಳೆಯೋ ಮರಳಿ ಸ್ವದೇಶಕ್ಕೆ ಮರಳಲಿದ್ದಾರೆ. ಅವರ ತಂದೆ ಎಚ್‌ಡಿ ರೇವಣ್ಣ ಅವರು ಹದಿನಾಲ್ಕು ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ












Click it and Unblock the Notifications