ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವೀಣ್‌ ನೆಟ್ಟಾರು ಹತ್ಯೆ; ಬಾಳೆಹೊನ್ನೂರಿನಲ್ಲಿ ಇಂದು ಬಂದ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ, 29 : ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ‌ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದಾರೆ. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಬಾಳೆಹೊನ್ನೂರು ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ. ಪ್ರವೀಣ್ ಹತ್ಯೆ ಖಂಡಿಸಿ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ, ಬಾಳೆ ಹೊನ್ನೂರಿನಲ್ಲಿ ಇಂದು ಬೆಳಗ್ಗೆ 11 ಘಟೆಗೆ ಪ್ರತಿಭಟನೆ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ನಿನ್ನೆ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಒಂದೆಡೆ ರಾಜೀನಾಮೆಗಳ ಪರ್ವ ಆಗುತ್ತಿದ್ದರೆ, ಮತ್ತೊಂದೆಡೆ ಪ್ರವೀಣ್‌ ಹತ್ಯೆ ಖಂಡಿಸಿ ನಗರದ ಹಲವೆಡೆ ಬಂದ್‌ಗೆ ಕರೆ ಕೊಡುತ್ತಿದ್ದಾರೆ. ಹೀಗೆ ನಗರದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೇಳುತ್ತಿವೆ. ಪ್ರವೀಣ್‌ ಹತ್ಯೆಗೈದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸುತ್ತಿವೆ.

Praveen Nettar case; Call for bandh in Balehonnur

ಅಲ್ಲದೇ ಇದೇ ವಿಚಾರವಾಗಿ ರಾಜ್ಯದ ಹಲವೆಡೆ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಪ್ರವೀಣ್ ಹತ್ಯೆಗೈದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಅನ್ನುವ ಕೂಗು ಜೋರಾಗಿಯೇ ಕೇಳಿಬರುತ್ತಿವೆ. ರಾಜ್ಯದ ಮೂಲೆ ಮೂಲೆಗಳಲ್ಲೂ ಘರ್ಷಣೆಗಳು ಆಗುತ್ತಿದ್ದು, ಗಲಭೆಕೋರರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪರಿಸ್ಥತಿಯನ್ನು ನಿಯಂತ್ರಿಸಲು ಬೇರೆ ಕಡೆಗಳಿಂದ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗುತ್ತಿದೆ. ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಿನ ಹೊರವಲಯದ‌ ಸುರತ್ಕಲ್ ಬಳಿ ಫಾಜೀಲ್ ಎಂಬುವವನ ಹತ್ಯೆಯಾಗಿದ್ದು, ಅಲ್ಲಿನ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಹೊರಡಿಸಿ ಶನಿವಾರ ಬೆಳಗ್ಗೆವರೆಗೆ ಅಲ್ಲಿನ ಶಾಲಾ-ಕಾಲೇಜಿಗಳಿಗೆ ರಜೆ ಘೋಷಿಸಿದ್ದಾರೆ.

Praveen Nettar case; Call for bandh in Balehonnur

ಚಿಕ್ಕಮಗಳೂರಿನಲ್ಲಿ ನಿನ್ನೆಯಂತೆ ಇವತ್ತು ಕೂಡ ಹಿಂದೂಪರ ಸಂಘಟನೆಯವರು ಬಂದ್‌ಗೆ ಕರೆ ಕೊಟ್ಟಿದ್ದು, ಪರಿಸಾಧ್ಯತೆ ಸ್ಥಿತಿ ಇನ್ನಷ್ಟು ಬಿಗಾಡಾಯಿಸುವ ಇದೆ. ಆದ್ದರಿಂದ ಸೂಕ್ತ ಭದ್ರತೆಗೆ ಪೊಲೀಸರು ಜಮಾವಣೆ ಆಗುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ.

Recommended Video

Karnataka: ನೆಟ್ಟಾರು ಅಂಗಡಿಯಲ್ಲಿ ಕೆಲಸಕಿದ್ದ ವನ ಪುತ್ರನಿಂದಲೆ ಸ್ಕೆಚ್!! | Politics | OneIndia Kannada

English summary
Activists of pro-Hindu organizations have called a bandh in Balehonnur of NR Pura taluk to condemn the killing of Praveen Nettar. Businessmen have shown their support for the bandh by closing their shops. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X