Get Updates
Get notified of breaking news, exclusive insights, and must-see stories!

ಶೃಂಗೇರಿಗೆ ರಾಷ್ಟ್ರಪತಿ ಭೇಟಿ: ವ್ಯಾಪಾರ ಮಳಿಗೆ ಮುಚ್ಚಲು ಆದೇಶ; ಜನರ ಆಕ್ರೋಶ

ಚಿಕ್ಕಮಗಳೂರು, ಅಕ್ಟೋಬರ್ 7: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತವು ಶೃಂಗೇರಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ವ್ಯಾಪಾರ ಮಳಿಗೆಗಳನ್ನು ಅಕ್ಟೋಬರ್ 7 ಮತ್ತು 8ರಂದು ಮುಚ್ಚುವಂತೆ ಆದೇಶಿಸಿದೆ.

ಅಕ್ಟೋಬರ್ 6ರಂದು ಪಟ್ಟಣ ಪಂಚಾಯತ್ ಅಧಿಕಾರಿಗಳು ಎರಡು ದಿನಗಳ ಕಾಲ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ವ್ಯಾಪಾರಿಗಳಿಗೆ ಮನವಿ ಮಾಡುವ ಪ್ರಕಟಣೆಯೊಂದಿಗೆ ಇಡೀ ಪಟ್ಟಣವನ್ನು ಸುತ್ತಿದರು.

ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಟಿ.ಲೀಲಾವತಿ "ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶೃಂಗೇರಿ ಪಟ್ಟಣ ಪಂಚಾಯತ್ ಈ ಮನವಿಯನ್ನು ಮಾಡಿದೆ. ಅಂಗಡಿಗಳು ಎರಡು ದಿನಗಳವರೆಗೆ ಮುಚ್ಚಿರಬೇಕು," ಎಂದು ಅವರು ಹೇಳಿದ್ದಾರೆ. ಪಟ್ಟಣದಲ್ಲಿ ಸುಮಾರು 470 ವ್ಯಾಪಾರ ಮಳಿಗೆಗಳಿವೆ.

President Visit To Sringeri: Traders Outrage Against Chikkamagaluru District Administration

ಈ ನಿರ್ಧಾರ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಕೋವಿಡ್- 19 ಲಾಕ್‌ಡೌನ್‌ನಿಂದಾಗಿ ಈಗಾಗಲೇ ವ್ಯಾಪಾರಿಗಳು ನಷ್ಟವನ್ನು ಅನುಭವಿಸಿರುವುದರಿಂದ ಮತ್ತೆ ಅಂಗಡಿ- ಮುಂಗಟ್ಟು ಮುಚ್ಚುವ ಈ ನಿರ್ಧಾರದಿಂದ ಕೋಪಗೊಂಡಿದ್ದಾರೆ.

ಶೃಂಗೇರಿ ನಿವಾಸಿಯಾದ ಆರ್. ಶಬರೀಶ್ ಮಾತನಾಡಿ, "ನಮ್ಮ ಮೇಲೆ ಇಂತಹ ನಿರ್ಬಂಧಗಳನ್ನು ಹೇರುವ ಅವಶ್ಯಕತೆ ಏನಿತ್ತು? ರಾಷ್ಟ್ರಪತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ ಮತ್ತು ಅವರ ಭೇಟಿಯ ಬಗ್ಗೆ ಸಂತೋಷ ಪಡುತ್ತೇವೆ. ಆದರೆ, ಜಿಲ್ಲಾಡಳಿತವು ಅಂಗಡಿಯವರಿಗೆ ಏಕೆ ಎರಡು ದಿನಗಳ ಕಾಲ ಮುಚ್ಚುವಂತೆ ಒತ್ತಾಯಿಸಬೇಕು?,'' ಎಂದು ಪ್ರಶ್ನಿಸಿದರು.

ರಾಷ್ಟ್ರಪತಿಗಳ ಭೇಟಿಯ ಸಮಯದಲ್ಲಿ ಮೂರು ಹೆಲಿಕಾಪ್ಟರ್‌ಗಳು ಪಟ್ಟಣದಲ್ಲಿ ಇಳಿಯುತ್ತವೆ, ಭೇಟಿಯ ಸಿದ್ಧತೆಗಾಗಿ ಖರ್ಚು ಮಾಡಲಾದ ಹಣದ ಬಗ್ಗೆಯೂ ಶೃಂಗೇರಿ ನಿವಾಸಿಗಳು ಕೋಪಗೊಂಡಿದ್ದಾರೆ.

President Visit To Sringeri: Traders Outrage Against Chikkamagaluru District Administration

ಈ ಮೊದಲು ಜಿಲ್ಲಾಡಳಿತವು ಗಾಂಧಿ ಮೈದಾನದಲ್ಲಿ ಮೂರು ಹೆಲಿಕಾಪ್ಟರ್‌ಗಳನ್ನು ನಿಲ್ಲಿಸಲು ಅನುಮತಿ ನೀಡಿತ್ತು. ಆವರಣದಲ್ಲಿರುವ ತಾತ್ಕಾಲಿಕ ಅಂಗಡಿಗಳನ್ನು ಖಾಲಿ ಮಾಡುವಂತೆ ಕೋರಲಾಗಿದೆ.

ಆದರೆ ಈಗ, ಕೇವಲ ಒಂದು ಹೆಲಿಕಾಪ್ಟರ್ ಅನ್ನು ನಿಲುಗಡೆ ಮಾಡಲು ಗಾಂಧಿ ಮೈದಾನವನ್ನು ಬಳಸಿಕೊಳ್ಳಲಾಗುವುದು. ಎರಡು ಹೆಲಿಕಾಪ್ಟರ್‌ಗಳನ್ನು ನಿಲುಗಡೆ ಮಾಡಲು ಕೊರಡಕಲ್ಲು ಜಾಗದಲ್ಲಿ ಹೆಲಿಪ್ಯಾಡ್ ರಚಿಸಲು ಹೆಚ್ಚುವರಿ ಹಣವನ್ನು ಖರ್ಚು ಮಾಡಲಾಗುತ್ತಿದೆ.

"ಗ್ರಾಮ ಪಂಚಾಯಿತಿಗಳು ಮತ್ತು ಪಟ್ಟಣ ಪಂಚಾಯಿತಿಗಳು ಹಣಕ್ಕಾಗಿ ವಿನಂತಿಸಿದಾಗ, ಸರ್ಕಾರವು ಕೋವಿಡ್- 19 ಅನ್ನು ಉಲ್ಲೇಖಿಸಿ ನಿರಾಕರಿಸುತ್ತದೆ. ಆದರೆ, ಹೆಲಿಪ್ಯಾಡ್‌ಗಳ ನಿರ್ಮಾಣಕ್ಕೆ ಸರ್ಕಾರವು ದೊಡ್ಡ ಮೊತ್ತವನ್ನು ಖರ್ಚು ಮಾಡುತ್ತಿದೆ,'' ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ಶಬರೀಶ್ ಹೇಳಿದರು.

ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ
ಅಕ್ಟೋಬರ್ 8ರಂದು ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ ಶುಕ್ರವಾರದಂದು ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 8ರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಶೃಂಗೇರಿ ಮಠದಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮ ನಡೆಯಲಿದೆ. ಶಾರದಾಂಬೆ ದರ್ಶನದ ಜತೆಗೆ ಹಿರಿಯ ಹಾಗೂ ಕಿರಿಯ ಶ್ರೀಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.

ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕೆಲವು ಮರಗಳನ್ನು ಕೆಡವಲಾಗಿದೆ. ಹೆಲಿಪ್ಯಾಡ್ ನಿರ್ಮಿಸಲು ಮರಗಳನ್ನು ಕಡಿಯುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 8ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ರಾಷ್ಟ್ರಪತಿಗಳ ಭದ್ರತಾ ಪಡೆ ಸಿಬ್ಬಂದಿ ಹೆಲಿಕಾಪ್ಟರ್ ಪ್ರಾಯೋಗಿಕ ಹಾರಾಟ ನಡೆಸಿದರು.

ಬುಧವಾರದಿಂದ 4 ದಿನಗಳ ಕಾಲ ರಾಷ್ಟ್ರಪತಿ ರಾಮನಾಥ ಕೋವಿಂದ್ ಕರ್ನಾಟಕ ಪ್ರವಾಸದಲ್ಲಿ ಇದ್ದಾರೆ. ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಕರ್ನಾಟಕ ಪ್ರವಾಸ ಮುಗಿಸಿ ಅ. 9ರಂದು ರಾಷ್ಟ್ರಪತಿಗಳು ದೆಹಲಿಗೆ ವಾಪಾಸ್ ಹೋಗಲಿದ್ದಾರೆ.

ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಅ. 7ರಂದು ಸಂಜೆ ಮಂಗಳೂರಿಗೆ ತೆರಳಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅ. 8ರಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ರಾಮನಾಥ್ ಕೋವಿಂದ್ ದೆಹಲಿಗೆ ತೆರಳಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+