Priyanka Gandhi Vadra: ಕಾಫಿನಾಡಿನ ಪ್ರಮುಖ ದೇವಸ್ಥಾನ, ಮಠಗಳಿಗೆ ಭೇಟಿ ನೀಡಲಿರುವ ಪ್ರಿಯಾಂಕ ಗಾಂಧಿ, ಮತಬೇಟೆಗೆ ಕೈ ಪಡೆ ಸಜ್ಜು

ಚಿಕ್ಕಮಗಳೂರು, ಏಪ್ರಿಲ್‌, 26: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಪ್ರಿಯಾಂಕಾ ಗಾಂಧಿ ಕಾಫಿನಾಡಿನಲ್ಲಿರುವ ಪ್ರಮುಖ ದೇವಸ್ಥಾನಗಳು ಹಾಗೂ ಮಠಗಳಿಗೆ ಭೇಟಿ ನೀಡಲಿದ್ದಾರೆ. ತದನಂತರ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರದ ಕಹಳೆಯನ್ನು ಮೊಳಗಿಸಲಿದ್ದಾರೆ.

ಬೆಳಗ್ಗೆ 10:30ಕ್ಕೆ ಶೃಂಗೇರಿ ಶಾರದಾ ಮಠ, ಮಧ್ಯಾಹ್ನ 12ಕ್ಕೆ ರಂಭಾಪುರೀ ಪೀಠಕ್ಕೆ ಭೇಟಿ ನೀಡಲಿರುವ ಪ್ರಿಯಾಂಕಾ ಗಾಂಧಿ ಅವರು, ನಂತರ‌ ಬಾಳೆಹೊನ್ನೂರಿನಲ್ಲಿ ಕಾರ್ಯಕತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡರ ಪರ ಮತಯಾಚನೆ ನಡೆಸಲಿದ್ದಾರೆ.

Priyanka Gandhi Vadra will visits Chikkamagaluru district major temples and mutt

ಮಹಿಳೆ ಕಾರ್ಯಕರ್ತೆಯರ ಜೊತೆ ಸಂವಾದ

ಈಗಾಗಲೇ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ ಬೇಟೆ ನಡೆಸಿದ್ದು, ಕಾಂಗ್ರೆಸ್‌ ಮಹಿಳೆ ಕಾರ್ಯಕರ್ತೆಯರ ಜೊತೆ ಸಂವಾದ ನಡೆಸಿದ್ದಾರೆ.

ಮಹಿಳೆಯರ ಸಂವಾದದಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕೊಕ್ಕಬೊರೆ ಗ್ರಾಮದ ಬೊಮ್ಮಮ್ಮ ಮಾತನಾಡಿ 'ನಮಗೆ ಇಷ್ಟು ವರ್ಷಗಳಾದರೂ ವಿದ್ಯುತ್ ಇಲ್ಲ, ರಸ್ತೆಯೂ ಇಲ್ಲ, ಮನೆಗಳು ಇಲ್ಲ, ಸೂಕ್ತ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ' ಎಂದು ಅಳಲು ತೋಡಿಕೊಂಡರು. ಇದಕ್ಕೆ, ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಬರಲಿದೆ, ಎಲ್ಲ ಸಮಸ್ಯೆಯನ್ನು ಪರಿಹಾರ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.

ಹನೂರು ತಾಲೂಕಿನ ಹೊಸಪೋಡು ಗ್ರಾಮದ ತಿರುಮಮ್ಮ ಮಾತನಾಡಿ, ಇಂದಿರಾ ಗಾಂಧಿ ಅವರ ಕಾಲದಲ್ಲಿ ನಮಗೆ ಸೌಲಭ್ಯಗಳು ಸಿಕ್ಕಿದವು, ನೀವು ಇಂದಿರಾ ಪ್ರತಿರೂಪದಂತೆ ಇದ್ದೀರಿ, ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಎಂದು ಹೇಳಿದ್ದಕ್ಕೆ ವೇದಿಕೆಯಿಂದ ಕೆಳಗಿಳಿದು ಬಂದ ಪ್ರಿಯಾಂಕ ಗಾಂಧಿ ತಿರುಮಮ್ಮ ಅಪ್ಪಿಕೊಂಡರು.

ಇನ್ನು, ಪ್ರಿಯಾಂಕಾ ಅಪ್ಪುಗೆ ಬಗ್ಗೆ ತಿರುಮಮ್ಮ ಮಾತನಾಡಿ, ನಮ್ಮ ಸಮಸ್ಯೆಗಳನ್ನು ಈಡೇರಿಸುವ ಭರವಸೆ ಕೊಟ್ಟಿದ್ದಾರೆ, ಕಾಂಗ್ರೆಸ್ ಇದ್ದಾಗಲೇ ನಾನು ಗ್ರಾಮ ಪಂಚಾಯತಿ ಸದಸ್ಯಳಾಗಿದ್ದೆ, ನಮ್ಮ ಮತ ಯಾವಾಗಲೂ ಕಾಂಗ್ರೆಸ್‌ಗೆ ಎಂದರು.

ಭದ್ರತೆ ಬಿಟ್ಟು ಜನರ ಬಳಿ ಬಂದ ಪ್ರಿಯಾಂಕ ಗಾಂಧಿ

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯೂ ಕಾರಿನಿಂದ ಇಳಿದು ಜನರ ಬಳಿ ತೆರಳಿದ ಪ್ರಿಯಾಂಕಾ ಗಾಂಧಿ ಹಸ್ತಲಾಘವ ಕೊಟ್ಟು, ನಮಸ್ಕಾರ ಕಾರ್ಯಕ್ರಮದ ಕೊನೆಯಲ್ಲೂ ವೇದಿಕೆಯಿಂದ ಇಳಿದು ಜನರ ಬಳಿ ಮಿಂಚಿನ ಸಂಚಾರ ನಮಾಡಿದರು. ಡೆಸಿ ಗಮನ ಸೆಳೆದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+