ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಡೂರು; ಸಖರಾಯಪಟ್ಟಣ ಪೊಲೀಸರ ವಿರುದ್ಧ ಜನರ ಪ್ರತಿಭಟನೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 25 : ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದೆ. ಠಾಣೆಯ ಪಿಎಸ್‌ಐ ಸ್ಥಳೀಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಪ್ರತಿಭಟಿಸಿದರು.

ಶುಕ್ರವಾರ ಸಖರಾಯಪಟ್ಟಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನೂರಾರು ಜನರು ದಿನೇಶ್ ಎಂಬುವರ ಮೇಲೆ‌ ಪಿಎಸ್ಐ ಹರೀಶ್ ನಾಯ್ಕ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ನಿವೃತ್ತ ಸರ್ಕಾರಿ ಅಧಿಕಾರಿ ಚಿನ್ನಾಭರಣ ದೋಚಿದ ನಕಲಿ ಪೊಲೀಸ್! ನಿವೃತ್ತ ಸರ್ಕಾರಿ ಅಧಿಕಾರಿ ಚಿನ್ನಾಭರಣ ದೋಚಿದ ನಕಲಿ ಪೊಲೀಸ್!

Protest In Sakarayapattana Police Station

ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ದಿನೇಶ್ ಎಂಬುವರ ಮೇಲೆ ಪಿಎಸ್‌ಐ ಹಲ್ಲೆ ಮಾಡಿದ್ದಾರೆ. ಹಲ್ಲೆಯನ್ನು ಖಂಡಿಸಿದ ಜನರು ಸಖರಾಯಪಟ್ಟಣ ಗ್ರಾಮ ಬಂದ್ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಷ್ಕರ; ಪೊಲೀಸ್ ಭದ್ರತೆಯಲ್ಲಿ ಸಾಗುತ್ತಿದ್ದ ಬಸ್‌ಗೆ ಕಲ್ಲು! ಮುಷ್ಕರ; ಪೊಲೀಸ್ ಭದ್ರತೆಯಲ್ಲಿ ಸಾಗುತ್ತಿದ್ದ ಬಸ್‌ಗೆ ಕಲ್ಲು!

Protest In Sakarayapattana Police Station

ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್ ನೇತೃತ್ವದಲ್ಲಿ ಜನರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ನೂರಾರು ಜನರು ಪೊಲೀಸ್ ಠಾಣೆ ಮುಂದೆ ಕುಳಿತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

43 ಪೊಲೀಸ್ ಇನ್‌ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ 43 ಪೊಲೀಸ್ ಇನ್‌ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ

Recommended Video

ಬೆಂಗಳೂರು: ರಿಲಯನ್ಸ್ ಡಿಜಿಟಲ್ ಶಾಪ್ ನಲ್ಲಿ ಕಳ್ಳರ ಕರಾಮತ್ತು | Reliance digital | Oneindia Kannada

ಜನರ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಹೆಚ್ಚಿನ ಪೊಲೀಸರನ್ನು ಠಾಣೆಗೆ ಕರೆಸಿಕೊಳ್ಳಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನೆ ಮಾಡುತ್ತಿರುವ ಜನರ ಮನವೊಲಿಕೆ ಕಾರ್ಯವೂ ನಡೆಯುತ್ತಿದೆ.

English summary
People protest against Sakarayapattana, Chikkamagaluru district police station PSI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X