ಚಿಕ್ಕಮಗಳೂರು; ಗ್ರಾ.ಪಂಚಾಯಿತಿ ಕಚೇರಿ ಮುಂದೆಯೇ ಹೊಡೆದಾಟ
ಚಿಕ್ಕಮಗಳೂರು, ಜನವರಿ 25: ಗ್ರಾಮ ಪಂಚಾಯತಿ ಮುಂಭಾಗದಲ್ಲಿಯೇ ಪಂಚಾಯತ್ ಅಧ್ಯಕ್ಷ ಹಾಗೂ ಕರ ವಸೂಲಿಗಾರ ಕೊರಳ ಪಟ್ಟಿ ಹಿಡಿದು ಹೊಡೆದಾಡಿಕೊಂಡು ಅವಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮಹಿಳೆಯೊಬ್ಬರಿಗೆ ಕೋಳಿ ಫಾರಂಗೆ ಪರವಾನಗಿ ನೀಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಪಂಚಾಯತಿ ಅಧ್ಯಕ್ಷ ಆನಂದ್ ಹಾಗೂ ಕರವಸೂಲಿಗಾರ ಚಂದ್ರಾನಾಯ್ಕ ಇಬ್ಬರು ಜಗಳವಾಡುತ್ತಿದ್ದಂತೆ ಎರಡು ಬಣಗಳ ನಡುವೆ ಹೊಡೆದಾಟ ಸಹ ನಡೆದಿದೆ. ಈ ವೇಳೆ ಕರವಸೂಲಿಗಾರ ಚಂದ್ರಾನಾಯ್ಕ ಮಗಳ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರ ಬಳಿಯೂ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಪಂಚಾಯತಿ ಅಧ್ಯಕ್ಷ ಹಾಗೂ ಕರ ವಸೂಲಿಗಾರ ಜಗಳವಾಡಿಕೊಂಡಿದ್ದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೋಳಿಫಾರಂ ಪರವಾನಿಗೆಗೆ ಸಂಬಂಧಿಸಿದಂತೆ ಅವ್ಯವಹಾರಕ್ಕೆ ಇಬ್ಬರು ಮುಂದಾಗಿದ್ರಾ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications