Chikkamagaluru Rain: ಚಿಕ್ಕಮಗಳೂರಿನಲ್ಲಿ ಮಳೆ: ಮೈದುಂಬಿ ಹರಿಯುತ್ತಿದೆ ಹೊನ್ನಮ್ಮನ ಹಳ್ಳ ಜಲಪಾತ- ಉರುಳಿದ ಗುಲಾಬಿ ಮನೆ!
ಚಿಕ್ಕಮಗಳೂರು ಮೇ 21: ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಮ್ಮನ ಹಳ್ಳ ಜಲಪಾತ ಚಿಕ್ಕಮಗಳೂರು ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದು. ಈ ಜಲಪಾತ ಸದ್ಯ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.
ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನ ಜಲಪಾತಕ್ಕೆ ಮತ್ತೆ ಮರುಜೀವ ಬಂದಂತಾಗಿದೆ. ಮುಂಗಾರು ಪೂರ್ವ ಮಳೆಯಲ್ಲೇ ಜಲಪಾತ ತುಂಬಿ ಹರಿಯುತ್ತಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೊನ್ನಮ್ಮನ ಹಳ್ಳ ಫಾಲ್ಸ್ ದುಮ್ಮಿಕ್ಕಿ ಹರಿಯುತ್ತಿದೆ. ಹೀಗಾಗಿ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಈ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಹೌದು... ನಿರಂತರ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಹೊಸ ಲೋಕದಂತಾಗಿದ್ದು, ಹೆಜ್ಜೆ ಹೆಜ್ಜೆಗೂ ಜಲಪಾತಗಳು ಸೃಷ್ಟಿಯಾಗಿವೆ. ಮಳೆಯ ನಡುವೆ ಮಂಜು ಮುಸುಕಿದ್ದು, ಕಾಫಿನಾಡು ಭೂಲೋಕದ ಸ್ವರ್ಗದಂತೆ ಕಾಣುತ್ತಿದೆ. ಈ ಸುಂದರವಾದ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇತರ ಜಿಲ್ಲೆಗಳಿಂದ ಜನ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಹೊನ್ನಮ್ಮನ ಹಳ್ಳ ಜಲಪಾತ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹೊನ್ನಮ್ಮನ ಹಳ್ಳ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಹೊನ್ನಮ್ಮಳ ಹಳ್ಳ ಜಲಪಾತ ನೋಡಲು ಪ್ರವಾಸಿಗರು ಮುಗಿಬಿದ್ದಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಈ ಜಲಪಾತದಲ್ಲಿಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಧಾರಾಕಾರ ಮಳೆಗೆ ಕುಸಿದ ಮನೆ
ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.
ಚಿಕ್ಕಮಗಳೂರಿನ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಕೆಲವು ಪ್ರವಾಸಿಗರು ಜಾಗ್ರತೆಯಿಂದ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿದರೆ ಇನ್ನೂ ಕೆಲವರು ಅಪಾಯದ ಸ್ಥಳಕ್ಕೆ ತೆರಳಿ ಹುಚ್ಚಾಟ ಮೆರೆಯುತ್ತಿದ್ದಾರೆ. ಹೊನ್ನಮ್ಮನ ಹಳ್ಳ ಜಲಪಾತದಲ್ಲಿ ನೀರಿನ ಮಧ್ಯೆ ನಿಂತು ಕುಣಿದು ಕುಪ್ಪಳಿಸುತ್ತಾ ಕೆಲವು ಪ್ರವಾಸಿಗರು ಅಜಾಗ್ರತೆಯಿಂದ ವರ್ತಿಸುತ್ತಿರುವುದು ಕೂಡ ಕಂಡು ಬಂದಿದೆ.

ಕರ್ನಾಟಕದಲ್ಲಿ ಮೇ 24ರಿಂದ ಮಳೆ ಪ್ರಮಾಣ ಹೆಚ್ಚಳ
ರಾಜ್ಯದಲ್ಲಿ ಮೇ ಮೇ 24ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಚಂಡಮಾರುತ ತೀವ್ರತೆ ಕಾರಣದಿಂದ ಕರ್ನಾಟಕದಲ್ಲಿ ಮೇ 25ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಮೇ 21ರಂದು ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆ ಆಗಲಿದೆ. ಹೀಗಾಗಿ ಇಲ್ಲಿ ಒಂದು ದಿನ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.
ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಮ್ಮನ ಹಳ್ಳ ಜಲಪಾತ ಚಿಕ್ಕಮಗಳೂರು ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದು. ಈ ಜಲಪಾತ ಸದ್ಯ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.#Rain #Waterfall #Chikkamagaluru #karnataka pic.twitter.com/mW59lGQsbS
— oneindiakannada (@OneindiaKannada) May 21, 2024
ಯಲ್ಲಾಪುರ, ಎಚ್ಡಿಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಹಗರಿಬೊಮ್ಮನಹಳ್ಳಿ, ಹೊಸದುರ್ಗಾ, ಚನ್ನರಾಯಪಟ್ಟಣ, ಶಿವಮೊಗ್ಗ, ದಾವಣಗೆರೆ, ಮಾಣಿ, ಸಂತೆಬೆನ್ನೂರು, ಹರಪನಹಳ್ಳಿಯಲ್ಲಿ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಮಳೆಗೆ ತುಂಬಿ ಹೋದ ದೇವನಹಳ್ಳ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ, ಸುತ್ತಮುತ್ತಲ ಪ್ರದೇಶಗಳು ಹಾಗೂತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗಿದ್ದು, ಜನಜೀವನ ತತ್ತರಸಿದೆ. ತಾಲೂಕಿನ ಯರಗುಂಟೆ ಗ್ರಾಮದ ಸುತ್ತಮುತ್ತ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು ಅಪಾರ್ಟ್‌ಮೆಮಟ್‌ಗಳಲ್ಲೂ ನೀರು ನುಗ್ಗಿದೆ.












Click it and Unblock the Notifications