ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು; ಹೊನ್ನಮ್ಮನಹಳ್ಳ ಜಲಪಾತದ ಬಳಿ ಭೂಕುಸಿತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 21; ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬುಧವಾರ ರಾತ್ರಿ ಭಾರೀ ಮಳೆ ಸುರಿದಿದೆ. ಇದರ ಪರಿಣಾಮ ಹೊನ್ನಮ್ಮನಹಳ್ಳ ಜಲಪಾತದ ಬಳಿ ಭೂಕುಸಿತ ಉಂಟಾಗಿದೆ. ಗಿರಿಭಾಗಕ್ಕೆ ತೆರಳುವ ರಸ್ತೆಯ ಕವಿಕಲ್‌ಗಂಡಿ ಸೇರಿದಂತೆ ಅಲ್ಲಲ್ಲಿ ರಸ್ತೆ ತಡೆಗೋಡೆ ಕುಸಿದುದ ಹೋಗಿದೆ.

ಹೊನ್ನಮ್ಮನಹಳ್ಳ ಜಲಪಾತದ ಹತ್ತಿರ ತೆರಳುವ ಮೆಟ್ಟಿಲುಗಳ ಅಕ್ಕಪಕ್ಕದಲ್ಲಿ ಭೂ ಕುಸಿತಗೊಂಡಿದ್ದು ಪಕ್ಕದ ಹೊನ್ನಮ್ಮನ ದೇವಸ್ಥಾನಕ್ಕೂ ಹಾನಿ ಉಂಟಾಗಿದೆ. ಮೆಟ್ಟಿಲುಗಳ ಕೆಳಗೆ ಸಂಪೂರ್ಣ ಧರೆಕುಸಿದಿದ್ದು ಮೆಟ್ಟಿಲುಗಳು ಸಹ ಕುಸಿದು ಬೀಳುವ ಆತಂಕ ಎದುರಾಗಿದೆ.

 ಅಕ್ಟೋಬರ್ 25ರವರೆಗೂ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಕ್ಟೋಬರ್ 25ರವರೆಗೂ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಭೂ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಹೊನ್ನಮ್ಮನಹಳ್ಳ ಜಲಪಾತದ ಹತ್ತಿರ ತೆರಳದಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಭೂ ಕಸಿತವಾಗಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪಂಡರವಳ್ಳಿ ಸಮೀಪವೂ ಸಹ ರಸ್ತೆಗೆ ಬೃಹತ್ ಗಾತ್ರದ ಬಂಡೆ ಬಿದ್ದಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿದೆ.

ಕರ್ನಾಟಕದಲ್ಲಿ ಕಡಿಮೆಯಾದ ಮಳೆ ಅಬ್ಬರ; ಡ್ಯಾಂಗಳ ನೀರಿನ ಮಟ್ಟಕರ್ನಾಟಕದಲ್ಲಿ ಕಡಿಮೆಯಾದ ಮಳೆ ಅಬ್ಬರ; ಡ್ಯಾಂಗಳ ನೀರಿನ ಮಟ್ಟ

ಗಿರಿಭಾಗಕ್ಕೆ ತೆರಳುವ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ನಿರ್ಮಿಸಲಾದ ತಡೆಗೋಡೆ ಬುಧವಾರ ರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಬಿರುಕು ಬಿಟ್ಟಿದೆ ಹಾಗೂ ತಡೆಗೋಡೆಗಳ ಪಕ್ಕದಲ್ಲಿ ರಸ್ತೆ ಸಣ್ಣದಾಗಿ ಬಿರುಕು ಬಿಟ್ಟು ಭೂಕುಸಿತ ಉಂಟಾಗುವ ಆತಂಕ ಎದುರಾಗಿದೆ.

ಮಳೆ ಅಬ್ಬರ; 119 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ ಮಳೆ ಅಬ್ಬರ; 119 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

ಮಳೆಗೆ ಸಾಕಷ್ಟು ಹಾನಿ

ಮಳೆಗೆ ಸಾಕಷ್ಟು ಹಾನಿ

ಕವಿಕಲ್‌ಗಂಡಿಯ ಸಮೀಪ ತಡೆಗೋಡೆ ಬಿರುಕು ಬಿಟ್ಟು ಕುಸಿತಗೊಂಡಿದ್ದು, ರಸ್ತೆ ಕುಸಿಯುವ ಆತಂಕ ಎದುರಾಗಿದೆ. ಇನ್ನು ದತ್ತಪೀಠಕ್ಕೆ ತೆರಳುವ ರಸ್ತೆಯಲ್ಲಿ ಅಲ್ಲಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಗಿರಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ರಸ್ತೆ ಹಾಗೂ ತಡೆಗೋಡೆ ಬಿರುಕು ಬಿಟ್ಟಿವೆ.

ಮಳೆ ಹೀಗೆ ಮುಂದುವರೆದರೆ ಮತ್ತಷ್ಟು ಹಾನಿಯುಂಟಾಗುವ ಸಂಭವವಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುರುವಾರ ಸಂಜೆಯೂ ಭಾರಿ ಮಳೆ ಮುಂದುವರೆದಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್. ಆರ್. ಪುರ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಬಯಲು ಸೀಮೆಯಲ್ಲಿಯೂ ಸಹ ಸಾಧಾರಣ ಮಳೆಯಾಗಿದೆ.

ರಾಜಕಾಲುವೆ ಸೇತುವೆ ಕುಸಿತ

ರಾಜಕಾಲುವೆ ಸೇತುವೆ ಕುಸಿತ

ನಗರದ ಮಧುವನ ಲೇಔಟ್‌ನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದ ಬಳಿಯ ರಾಜಕಾಲುವೆಗೆ ಅಡ್ಡಲಾಗಿನಿರ್ಮಿಸಲಾದ ಸೇತುವೆ ಗುರುವಾರ ಮಧ್ಯಾಹ್ನದ ಸುಮಾರಿಗೆ ದಿಢೀರ್ ಕುಸಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರೀಕ್ಷೆ ಬರೆದು ಹೊರಬಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದರು.

ಗುರುವಾರ ವಿದ್ಯಾರ್ಥಿಗಳು ಪರೀಕ್ಷಗೆ ತೆರಳಿದ್ದರು. ಪರೀಕ್ಷೆ ಮುಗಿಸಿ ವಾಪಾಸ್ ಬರುವಷ್ಟರಲ್ಲಿ ಸೇತುವೆ ಕುಸಿದ ಹಿನ್ನೆಲೆಯಲ್ಲಿ ಹೊರ ಬರಲು ಹರಸಾಹಸ ಪಟ್ಟರು. ಈ ವೇಳೆ ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳು ಪರೀಕ್ಷಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು ಸುರಕ್ಷಿತವಾಗಿ ಹೊರಕರೆದುಕೊಂಡು ಬಂದರು.

ಜಿಲ್ಲಾಧಿಕಾರಿಗಳ ಭೇಟಿ

ಜಿಲ್ಲಾಧಿಕಾರಿಗಳ ಭೇಟಿ

ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ. ಎನ್. ರಮೆಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, "ಮುಂದಿನ ಪರೀಕ್ಷೆಗಳಿಗೆ ಪರ್ಯಾಯ ಕಾಲೇಜನ್ನು ನಿಗದಿಪಡಿಸಿ, ಪರೀಕ್ಷಾ ಕೇಂದ್ರವನ್ನು ಬದಲಿಸುವಂತೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಜಗದೀಶ್ ಅವರಿಗೆ ಸೂಚಿಸಲಾಗಿದೆ" ಎಂದರು.

ಗುರುವಾರ ಸಂಜೆಯೂ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್. ಆರ್. ಪುರ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

Recommended Video

India vs Pakistan ಪಂದ್ಯದ ಬಗ್ಗೆ ಯಾರು ಏನು ಹೇಳಿದರು | Oneindia Kannada
ಶೀಘ್ರವೇ ಸಮಸ್ಯೆ ಪರಿಹಾರ

ಶೀಘ್ರವೇ ಸಮಸ್ಯೆ ಪರಿಹಾರ

ಸೇತುವೆ ಕುಸಿದ ಹಿನ್ನೆಲೆಯಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಸ್ಥಳಕ್ಕೆ ಇಂಜಿನಿಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಶಾಶ್ವತ ಪರಿಹಾರದ ಕುರಿತು ಯೋಜನೆ ರೂಪಿಸಲಾಗುತ್ತದೆ.

English summary
Due to heavy rain in Chikkamagaluru district landslide near Honnamanahalla waterfalls. Officials visited the spot and inspect the damage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X