ಚಿಕ್ಕಮಗಳೂರು ಮಳೆ: ಜನರು ಮಾತ್ರವಲ್ಲ, ಅಧಿಕಾರಿಗಳಿಗೂ ದಾರಿ ಸಿಗುತ್ತಿಲ್ಲ!
ಚಿಕ್ಕಮಗಳೂರು, ಆಗಸ್ಟ್ 9: ಕಾಫಿನಾಡು ಚಿಕ್ಕಮಗಳೂರಿನಾದ್ಯಂತ ವರುಣನ ರೌದ್ರ ನರ್ತನ ಮುಂದುವರಿದಿದೆ. ಅನಾಹುತಕಾರಿ ಮಳೆ ಜನರಲ್ಲಿ ಆತಂಕ ಹೆಚ್ಚಿಸಿದೆ. ಭೂಕುಸಿತ, ಪ್ರವಾಹ ದಿಕ್ಕೆಡಿಸವೆ.
ಮೂಡಿಗೆರೆ-ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ಭೂತನಕಾಡು ಎಂಬಲ್ಲಿ ಕಾಫಿ ತೋಟವೇ ರಸ್ತೆಗೆ ಕೊಚ್ಚಿಕೊಂಡು ಬಂದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿ.ಮೀ.ಗೂ ಹೆಚ್ಚು ಉದ್ದ ಸಂಚಾರ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಬಿದ್ದಿರುವ ಕಲ್ಲು,ಮಣ್ಣನ್ನು ತೆಗೆಯಲು ಜನರು ಹರಸಾಹಸ ಪಟ್ಟರು.
ಮೂಡಿಗೆರೆಗೆ ಸಂಪರ್ಕಿಸುವ ಬಹುತೇಕ ರಸ್ತೆಗಳಿಗೆ ಹಾನಿಯಾಗಿದ್ದು, ಮೂಡಿಗೆರೆ ಪಟ್ಟಣ ಎಲ್ಲ ಕಡೆಗಳಿಂದಲೂ ಸಂಪರ್ಕ ಕಡಿಕೊಳ್ಳುತ್ತಿದೆ. ಕೊಟ್ಟಿಗೆಹಾರದ ಪರಿಹಾರ ಕೇಂದ್ರಕ್ಕೆ ಹೊರಟಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಸ್ತೆ ಸಂಪರ್ಕ ಕಡಿತದಿಂದ ಅಲ್ಲಿಗೆ ತಲುಪಲು ಆಗದೆ ವಾಪಸ್ ಬಂದಿದ್ದಾರೆ.

ಪರಿಹಾರ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೆ ಜಾವಳಿಯಲ್ಲಿ ಹಲವು ಕುಟುಂಬಗಳು ಆತಂಕಕ್ಕೆ ಸಿಲುಕಿವೆ. ಜನರು ಮಾತ್ರವಲ್ಲದೆ, ರಸ್ತೆ ಸಂಪರ್ಕವಿಲ್ಲದೆ ಅಧಿಕಾರಿಗಳು ಸಹ ಪರದಾಡುವಂತಾಗಿದೆ.
ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಮಲೆಮನೆ ಎಂಬ ಗ್ರಾಮದಲ್ಲಿ ಒಂಬತ್ತು ಜನರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಈ ಗ್ರಾಮಕ್ಕೆ ಸಂಪರ್ಕಿಸುವ ಎಲ್ಲ ಮಾರ್ಗಗಳೂ ಕಡಿತಗೊಂಡಿವೆ. ಹತ್ತಾರು ಮನೆಗಳು ಗಾಳಿ ಮಳೆಗೆ ನೆಲಸಮವಾಗಿವೆ. ಭಯಭೀತರಾಗಿರುವ ಜನರು ಒಂದೇ ಮನೆಯಲ್ಲಿ ರಕ್ಷಣೆ ಪಡೆದುಕೊಂಡಿದ್ದಾರೆ.
ಈ ಮನೆಯಿಂದಲೇ ಅಧಿಕಾರಿಗಳನ್ನು ಫೋನ್ ಮೂಲಕ ಸಂಪರ್ಕಿಸುವಲ್ಲಿ ಯಶಸ್ವಿಯಾದ ಜನರು ತಮ್ಮನ್ನು ರಕ್ಷಿಸುವಂತೆ ಅವರಿಗೆ ಕೋರಿದ್ದಾರೆ. ಆದರೆ, ಅಲ್ಲಿಗೆ ತೆರಳಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಈ ಗ್ರಾಮದ ಸುಮಾರು 200 ಜನರು ಈಗಾಗಲೇ ಕೊಟ್ಟಿಗೆಹಾರ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಮಳೆ ಇನ್ನಷ್ಟು ತೀವ್ರಗೊಳ್ಳುತ್ತಿರುವುದರಿಂದ ಮಲೆಮನೆ, ಬಾಳೂರು, ಚನ್ನಹಡ್ಲು ಸೇರಿದತೆ ವಿವಿಧ ಗ್ರಾಮಗಳಲ್ಲಿ ಮಳೆ ಅಬ್ಬರಕ್ಕೆ ಅನೇಕ ಮನೆಗಳು ಕುಸಿದಿವೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications