ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ, ಹತ್ತಕ್ಕೇರಿದ ಸಾವಿನ ಸಂಖ್ಯೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 14: ಮಲೆನಾಡಿನ ಭಾಗದಲ್ಲಿ‌ ಮತ್ತೆ ಮಳೆ ಅಬ್ಬರ ಆರಂಭಗೊಳ್ಳುತ್ತಿದೆ. ಮೂಡಿಗೆರೆ ತಾಲ್ಲೂಕಿನ‌ ಕೊಟ್ಟಿಗೆಹಾರ ಸುತ್ತಮುತ್ತ ಗ್ರಾಮಗಳಲ್ಲಿ ಮಳೆ ಶುರುವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಈಗಾಗಲೇ ಬಿದ್ದಿರುವ ಗುಡ್ಡ ಕುಸಿತದ ಮಣ್ಣು ತೆರವು ಕಾರ್ಯಕ್ಕೂ ಇದರಿಂದ ಅಡ್ಡಿಯಾಗಿದೆ.

 ಕರಾವಳಿಯಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್ ಕರಾವಳಿಯಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್

ಈ ನಡುವೆ ಶನಿವಾರ ಗುಡ್ಡ ಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿಕೊಂಡಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಹಿರೇಬೈಲ್ ಸಮೀಪದ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತಗೊಂಡು ಮಣ್ಣಿನಡಿ ಸಿಲುಕಿದ್ದ ಸಂತೋಷ್ (42) ಅವರ ಮೃತದೇಹವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಇಂದು ಹೊರತೆಗೆದಿದ್ದಾರೆ.

Rain Started Again In Chikkamagaluru Death Toll Rise To 10

ಜೊತೆಗೆ ಸೈನಿಕರು ರಕ್ಷಿಸಿದ್ದ, ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಹಲಗಡಕ ನಿವಾಸಿ ಕಿಟ್ಟು ಪೂಜಾರಿ ಕೂಡ ಸಾವನ್ನಪ್ಪಿದ್ದಾರೆ. ಒಟ್ಟಾರೆ ಇದುವರೆಗೂ ಮಳೆ, ಪ್ರವಾಹದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿದೆ.

English summary
It is raining again in villages around Mudigere Taluk. So far, the death toll in the district has risen to ten.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X