ದೀಪಾವಳಿ ಪಟಾಕಿ ಮಳಿಗೆ ತೆರೆಯಲು ಮಾರ್ಗಸೂಚಿ ಬಿಡುಗಡೆ
ಚಿಕ್ಕಮಗಳೂರು, ನವೆಂಬರ್ 2: ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಈ ವರ್ಷದ ದೀಪಾವಳಿ ಹಬ್ಬವನ್ನು ಆಚರಿಸುವ ಸಂಬಂಧ ಸಾರ್ವಜನಿಕರು ಹಾಗೂ ಅಧಿಕೃತ ಪರವಾನಗಿ ಹೊಂದಿರುವ ಪಟಾಕಿ ಮಾರಾಟಗಾರರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಸಿಡಿಸುವ ಸಂಬಂಧ ಸರ್ಕಾರ ಆದೇಶದೊಂದಿಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಪಟಾಕಿ ಮಾರಾಟ ಮಾರ್ಗಸೂಚಿಗಳು ಕೆಳಕಂಡಂತಿವೆ
* ಪಟಾಕಿ ಮಾರಾಟ ಮಳಿಗೆಯನ್ನು ನವೆಂಬರ್ 1 ರಿಂದ 17 ರವರೆಗೆ ಮಾತ್ರ ತೆರೆದಿರತಕ್ಕದ್ದು.
* ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ತಾತ್ಕಾಲಿಕ ಮಳಿಗೆಗಳನ್ನು ತೆರೆಯಬೇಕು.

* ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ/ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ತೆರೆಯುವುದಾಗಿದೆ.
* ಮಳಿಗೆಗಳು ಕನಿಷ್ಠ ಆರು ಮೀಟರ್ ಅಂತರ ಇರುವಂತೆ ನೋಡಿಕೊಳ್ಳಬೇಕು ಹಾಗೂ ಮಾಲಿನ್ಯ ರಹಿತವಾಗಿ ಹಬ್ಬವನ್ನು ಆಚರಿಸುವಂತೆ ತಿಳಿಸಿದೆ.
* ಪಟಾಕಿ ಮಾರಾಟ ಮಾಡುವ ಮಳಿಗೆ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸ್ ಮಾಡುವುದು, ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸಾಮಾಜಿಕ ಅಂತರದೊಂದಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮುಂಜಾಗ್ರತೆ ಕೈಗೊಳ್ಳಬೇಕು.












Click it and Unblock the Notifications