ಹೋಟೆಲ್ ನಲ್ಲಿ ಕ್ವಾರಂಟೈನ್; ಸ್ವಿಚ್ ಆಫ್ ಆಯ್ತು ಕೆಲಸಗಾರರ ಮೊಬೈಲ್

ಚಿಕ್ಕಮಗಳೂರು, ಮೇ 11: ತಮ್ಮ ಹೋಟೆಲ್ ಅನ್ನು ಕ್ವಾರಂಟೈನ್ ಸೆಂಟರ್ ಮಾಡುತ್ತಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಹೋಟೆಲ್ ಸಿಬ್ಬಂದಿಯೆಲ್ಲರೂ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ವೈಟ್ ಫೆದರ್ ಹೋಟೆಲ್ ನಲ್ಲಿ ವಿದೇಶ ಹಾಗೂ ಹೊರರಾಜ್ಯದಿಂದ ಬಂದವರನ್ನು ಕ್ವಾರಂಟೈನ್ ಮಾಡಬೇಕೆಂದು ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಭಯಗೊಂಡ ಹೋಟೆಲ್ ಸಿಬ್ಬಂದಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಈ ಹೋಟೆಲ್ ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ ವಿರೋಧ ವ್ಯಕ್ತಪಡಿಸಿದ್ದರು.

 Residents Opposed Quarantine In Hotel At Chikkamagaluru

ಕ್ವಾರಂಟೈನ್ ವಿರೋಧಿಸುವ ಜನರ ವಿರುದ್ಧ ಕಾನೂನು ಕ್ರಮ
ನಗರದ ಒಳಗೆ ಇರುವ ಈ ಹೋಟೆಲ್ ಅನ್ನು ಕ್ವಾರಂಟೈನ್ ಕೇಂದ್ರ ಮಾಡುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದರು. ನಗರದ ಹೊರಭಾಗದಲ್ಲಿ ಸಾಕಷ್ಟು ಹೋಟೆಲ್ ಗಳಿವೆ, ಅಲ್ಲಿ ಕ್ವಾರಂಟೈನ್ ಮಾಡಿ. ನಗರದೊಳಗಿನ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಿದರೆ ಆತಂಕ ಹೆಚ್ಚಾಗುತ್ತದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಹೋಟೆಲ್ ಮುಂಭಾಗದ ಮೆಟ್ಟಿಲುಗಳ ಮೇಲೆ ಕೂತು ಪ್ರತಿಭಟನೆ ಕೂಡ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+