• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿದ್ದ ನಿರ್ಬಂಧ ತೆರವು

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಆಗಸ್ಟ್ 30: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹಾಕಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಸಡಿಲಗೊಳಿಸಿದೆ. ಪ್ರವಾಸಿಗರು ಕೋವಿಡ್ ಸಂಬಂಧ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿ, ಪ್ರವಾಸಿ ತಾಣಗಳಿಗೆ ತೆರಳಲು ಅವಕಾಶ ಕಲ್ಪಸಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಸೂಚಿಸಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಆದರೆ ಲಾಕ್ ಡೌನ್ ಸಡಿಲಿಕೆ ಆದ ಕಾರಣ ಜಿಲ್ಲೆಯ ಪ್ರವಾಸಿ ತಾಣಗಳಿಗೂ ಅನುಮತಿ ನೀಡಲಾಗಿತ್ತು. ಆದರೆ ಈ ವೇಳೆ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಪ್ರವಾಸಿಗರು ಕೊರೊನಾ ನಿಯಮಗಳನ್ನು ಪಾಲಿಸದ ಕಾರಣ ಸ್ಥಳೀಯರು ಆತಂಕಗೊಂಡಿದ್ದರು.

ನಿಷೇಧವಿದ್ದರೂ ಚಾರ್ಮಾಡಿ ಘಾಟ್ ನಲ್ಲಿ ಪ್ರಿ ವೆಡ್ಡಿಂಗ್ ಶೂಟ್, ಆಕ್ರೋಶ

ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧ ಹಾಕುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು ಮನವಿ ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳಿಗೆ ನಿರ್ಬಂಧ ಹಾಕಿದ್ದರು. ಈಗ ಆ ನಿರ್ಬಂಧ ಸಡಿಲಗೊಳಿಸಿದ್ದು, ಪ್ರವಾಸಿಗರಿಗೆ ಪ್ರವಾಸಿ ತಾಣಗಳಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನು ಪ್ರವಾಸಿ ತಾಣಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ, ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕೊರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದ್ದು, ದೊಡ್ಡ ದೊಡ್ಡ ವಾಹನಗಳಲ್ಲಿ ಗುಂಪುಗುಂಪಾಗಿ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದ್ದು, ಸಣ್ಣ ವಾಹನಗಳಲ್ಲಿ ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

English summary
In the wake of coronavirus, the district Administration has relaxed the restrictions placed on tourist destinations in Chikkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X