ಕೊರೊನಾ ಭೀತಿ: ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಧಿಕಾರಿಯಿಂದ ನಿರ್ಬಂಧ
ಚಿಕ್ಕಮಗಳೂರು, ಜೂನ್ 29: ಮಹಾಮಾರಿ ಕೊರೊನಾ ವೈರಸ್ ಆತಂಕವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮ್ಮ ಪ್ರವಾಸ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ.
Recommended Video
ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದರು. ವಿವಿಧ ಸಂಘಟನೆಗಳು ಮತ್ತು ಜನಪ್ರತಿನಿಧಿಗಳು ನಿರ್ಬಂಧಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡು ಆದೇಶ ಹೊರಡಿಸಿದ್ದಾರೆ.
ಪ್ರವಾಸಿಗರು ಕೊರೊನಾ ವೈರಸ್ ನಿಯಮ ಪಾಲಿಸದ ಹಿನ್ನೆಲೆ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ದೇವಿರಮ್ಮ ಬೆಟ್ಟ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಭಾನುವಾರ ಸಾವಿರಾರು ಜನ ಚಿಕ್ಕಮಗಳೂರಿನ ಗಿರಿ ಪ್ರದೇಶಕ್ಕೆ ಆಗಮಿಸಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ನಿರ್ಬಂಧ ಹೇರಿದ್ದಾರೆ.












Click it and Unblock the Notifications