ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬುಧವಾರದಿಂದ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳಿಗೆ ಸಂಚಾರ ಮುಕ್ತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 11: ಭಾರೀ ಗಾಳಿ, ಮಳೆಯಿಂದ ರಸ್ತೆ ಮೇಲೆ ಗುಡ್ಡದ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಇದೀಗ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

Recommended Video

ಬೆಂಗಳೂರಿನಲ್ಲಿ 50 ಸಾವಿರ ಅಂಗಡಿಗಳು ಬಂದ್ | Oneindia Kannada

ಆರು ದಿನಗಳ ಈ ಸಂಚಾರ ನಿರ್ಬಂಧವನ್ನು ಸಡಿಲಿಸಿದ್ದು, ನಾಳೆ (ಬುಧವಾರ)ಯಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೂ ಬೆಳಿಗ್ಗೆ 7 ರಿಂದ ಸಂಜೆ 7 ರತನಕ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

Road Open For Light Vehicles At Charmadi Ghat From Wednesday

ಕಾಫಿನಾಡಿನಲ್ಲಿ ಕೊರೊನಾ ಸೋಂಕಿನಿಂದ ಇಂದು ಮೂವರ ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ 92 ಜನರಲ್ಲಿ ಕೊರೊನಾ ಸೋಂಕು ಪಾಸಿಟಿವ್ ಪತ್ತೆಯಾಗಿದೆ. ಚಿಕ್ಕಮಗಳೂರು 33, ತರೀಕೆರೆ 31, ಕಡೂರು 11, ಮೂಡಿಗೆರೆ 5, ಶೃಂಗೇರಿ 6, ಎನ್.ಆರ್ ಪುರ 4, ಕೊಪ್ಪದಲ್ಲಿ 2 ಕೇಸ್ ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಂದು 58 ಸೋಂಕಿತರು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ 1706 ಮಂದಿ ಸೋಂಕಿತರು ಪತ್ತೆಯಾಗಿದ್ದು, 733 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇನ್ನೂ 939 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 34 ಜನ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ.

English summary
The Charmedi Ghat road was block by mudslides, But it is now open to light Vehicles traffic free.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X