Alcohol Sale: ಚಿಕ್ಕಮಗಳೂರಿನಲ್ಲಿ ಈ ದಿನಗಳಲ್ಲಿ ಮದ್ಯ ಮಾರಟ ನಿಷೇಧ
ಚಿಕ್ಕಮಗಳೂರು, ಏಪ್ರಿಲ್ 08: 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಕಾಫಿನಾಡಿನ ರಾಜಕೀಯ ಕಣ ಈಗಾಗಲೇ ರಂಗೇರಿದೆ.
ಏಪ್ರಿಲ್ 26ರ ಮತದಾನಕ್ಕೆ ಸಕಲ ಸಿದ್ಧತೆಯಾಗಿದೆ. ಈ ಮತದಾನ ದಿನದಂದು ಸಾರ್ವಜನಿಕ ಶಾಂತಿ ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 24ರ ಸಂಜೆ 5 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

ಎತ್ತಿನಗಾಡಿ ಜಾಥಾದ ಮೂಲಕ ಮತದಾನದ ಜಾಗೃತಿ
ಪ್ರತಿಯೊಬ್ಬ ಅರ್ಹ ಮತದಾರರು ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನದಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯ ಮತದಾನ ಮಾಡುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಹಾಗೂ ನಗರ ಸಭೆ ವತಿಯಿಂದ ಇಂದು ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿಗಾಗಿ ಏರ್ಪಡಿಸಿದ್ದ ಎತ್ತಿನಗಾಡಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾರರು ಯಾವುದೇ ಆಸೆ ಆಮಿಷಗಳಿಗೆ ಹಾಗೂ ಬೆದರಿಕೆಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರ ಕೂಡ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದರು.
ಪ್ರತಿಯೊಬ್ಬರು ಯೋಚಿಸಿ ಮತ ಚಲಾಯಿಸಿ ಕಳೆದ ಚುನಾವಣೆಯಲ್ಲಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿದ್ದು, ಈ ಬಾರಿ ಎಲ್ಲ ಅರ್ಹ ಮತದಾರರು ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಶೇ 90 ಕ್ಕೂ ಹೆಚ್ಚು ಮತದಾನವಾಗ ಬೇಕು ಎಂದ ಅವರು ಮತದಾನದ ಕುರಿತು ಜಿಲ್ಲಾ ಸ್ವೀಪ್ ಸಮಿತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ನಾರಾಯಣಕನಕರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದ್ದು, ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿ ಜಿಲ್ಲೆಯಲ್ಲಿ ಶೇ. 90ಕ್ಕೂ ಹೆಚ್ಚು ಮತದಾನವಾಗಬೇಕು ಎಂದು ಹೇಳಿದರು.












Click it and Unblock the Notifications