ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು; ಶಾಲೆಗೆ ಬೀಗ

ಚಿಕ್ಕಮಗಳೂರು, ಜನವರಿ 04: ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 15 ಶಿಕ್ಷಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಕಳಸ ತಾಲೂಕಿನ ಜೆ. ಎಂ. ಇ. ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 15 ಶಿಕ್ಷಕರಿದ್ದು, ಇಬ್ಬರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಉಳಿದ 13 ಶಿಕ್ಷಕರ ಪರೀಕ್ಷೆಯನ್ನು ಮಾಡಲಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ.

ಶಾಲೆಗಳು ಆರಂಭವಾದ ಬಳಿಕ ಒಂದು ದಿನ ಶಾಲೆ ನಡೆದಿತ್ತು. ಮಕ್ಕಳು ಸಹ ಶಾಲೆಗೆ ಬಂದಿದ್ದರು. ಈಗ ಕೋವಿಡ್ ಪಾಸಿಟಿವ್ ಬಂದಿರುವ ಶಿಕ್ಷಕರು ಸಹ ಶಾಲೆಗೆ ಬಂದಿದ್ದರು. ಇದರಿಂದಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿನ ಆತಂಕ ಉಂಟಾಗಿದೆ.

School Closed After Two Teachers Test Positive

ಶಾಲೆಗೆ ಆಗಮಿಸುವ ಶಿಕ್ಷಕರ ಕೋವಿಡ್ ಪರೀಕ್ಷೆಯನ್ನು ನಡೆಸುವುದು ಕಡ್ಡಾಯವಾಗಿದೆ. ಶಾಲೆಯ ಆಡಳಿತ ಮಂಡಳಿ ಶಿಕ್ಷಕರ ಕೋವಿಡ್ ವರದಿ ಕೈ ಸೇರುವ ಮುನ್ನವೇ ಅವರನ್ನು ಶಾಲೆಗೆ ಕರೆಸಿಕೊಂಡಿರುವುದು ಇದಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+