ಪಾಸಿಟಿವಿಟಿ ರೇಟ್‌ನಲ್ಲಿ ಪ್ರಥಮ; ಉಸ್ತುವಾರಿ ಸಚಿವರ ಜೊತೆ ಸಭೆ

ಚಿಕ್ಕಮಗಳೂರು, ಜೂನ್ 10; ಕೋವಿಡ್ ಸ್ಥಿತಿಗತಿ ಹಾಗೂ ಜಿಲ್ಲೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಮೊದಲನೇ ಸ್ಥಾನದಲ್ಲಿರುವ ಹಿನ್ನೆಲೆ ಸ್ಥಿತಿಗತಿಯ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನೆಡೆಸಿದರು.

ಚಿಕ್ಕಮಗಳೂರು ಜಿಲ್ಲೆ ಪಾಸಿಟಿವ್ ರೇಟ್‌ನಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿದ್ದು ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಹಾಗೂ ಉಸ್ತುವಾರಿ ಸಚಿವರ ಜೊತೆ ಸಮ್ಮುಖದಲ್ಲಿ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಜನರು ಬರುತ್ತಿರುವ ಹಿನ್ನೆಲೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 550 ಗ್ರಾಮಗಳು ಕೋವಿಡ್ ಮುಕ್ತ ಗ್ರಾಮಗಳಾಗಿದ್ದು ಆಕ್ಸಿಜನ್ ಬೇಡಿಕೆ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟರು. ಇನ್ನು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರುವ ಅಧಿಕಾರವನ್ನು ಜಿಲ್ಲಾಡಳಿತಕ್ಕೆ ಮುಂದಿನ ದಿನಗಳಲ್ಲಿ ನೀಡುವಂತೆ ಮನವಿ ಮಾಡಲಾಯಿತು.

Chikkamagaluru Seeks Extension Of Lockdown For Week

ಕೋವಿಡ್ ಪ್ರಮಾಣ ಇಳಿಕೆ; ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, "ಜಿಲ್ಲೆಯಲ್ಲಿ ಸುಮಾರು ಶೇ 54 ಕೋವಿಡ್ ಮುಕ್ತ ಗ್ರಾಮಗಳಿವೆ. ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ" ಎಂದು ತಿಳಿಸಿದರು.

"ಲಾಕ್‌ಡೌನ್ ಜಿಲ್ಲೆಯಲ್ಲಿ ಒಂದು ವಾರ ಮಂದೂಡಲು ಅವಕಾಶ ಕೇಳಲಾಗಿದೆ. ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮದ ಕುರಿತು ಸಂಜೆ ಸಿಎಂ ಸಭೆಯ ಬಳಿಕ ಜಿಲ್ಲೆಯಲ್ಲಿ ಯಾವ ನಿರ್ಧಾರ ತಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತಗೆದುಕೊಳ್ಳಲಾಗುವುದು" ಎಂದು ಸಚಿವರು ಹೇಳಿದರು.

"ಬೆಂಗಳೂರಲ್ಲಿ ಲಾಕ್‌ಡೌನ್ ಬಳಿಕ ಜನರು ಗ್ರಾಮಗಳತ್ತ ಬರಲು ಪ್ರಾರಂಭಿಸಿದ ಬಳಿಕ ಜಿಲ್ಲೆ ಕೋವಿಡ್ ಪಾಸಿಟಿವಿಟಿಯಲ್ಲಿ ಮೊದಲ ಸ್ಥಾನ ಬರಲು ಕಾರಣ ವಾಗಿದ್ದು ಈಗ ಸಾಕಷ್ಟು ಇಳಿಮುಖ ವಾಗುತ್ತಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+