ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ
ಚಿಕ್ಕಮಗಳೂರು, ನವೆಂಬರ್, 07: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ (87) ಅವರು ಕಳೆದ ರಾತ್ರಿ 12:20ಕ್ಕೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಡಿ.ಬಿ.ಚಂದ್ರೇಗೌಡರ ರಾಜಕೀಯದ ಹಾದಿ
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ರಾಜಕಾರಣಿ. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮ ದಂಪತಿಯ ಪುತ್ರರಾಗಿ 1936ರ ಆಗಸ್ಟ್ 26ರಂದು ಜನಿಸಿದ್ದ ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿದ್ದರು.
ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಚಂದ್ರೇಗೌಡ ಅವರು 1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. 1977ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು.
ರಾಜಕೀಯವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ಕ್ಷೇತ್ರ ತ್ಯಾಗ ಮಾಡಿ, ಕಾಂಗ್ರೆಸ್ ಇತಿಹಾಸದಲ್ಲಿ ಅಜರಾಮರರಾಗಿ ಉಳಿದರು. ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980ನೇ ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81ರಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರೂ ಆಗಿದ್ದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಗೆದ್ದಿದ್ದರು. ರಾಮಕೃಷ್ಣ ಹೆಗ್ಡೆಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ 1999 ರಿಂದ 2004ರ ವರೆಗೆ ಎಸ್.ಎಂ.ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರರೂ ಆಗಿದ್ದರು.
2009ರಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಪೂರ್ಣ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು.
2014ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಮಂಗಳವಾರ ಮುಂಜಾನೆ ತಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಇಹಲೋಕದ ಪಯಣ ಮುಗಿಸಿದ್ದಾರೆ. ಇಂದು ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗ ಮಂದಿರದಲ್ಲಿ ಡಿ.ಬಿ.ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications