ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಭೇಟಿ ಮಾಡಿದ ಸಿ. ಟಿ. ರವಿ; ಮನವಿ ಏನು?

|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 02: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಜೆಟ್ ಮಂಡನೆಯ ತಯಾರಿಯನ್ನು ಆರಂಭಿಸುತ್ತಿದ್ದಾರೆ. ಚಿಕ್ಕಮಗಳೂರು ಶಾಸಕ, ಮಾಜಿ ಸಚಿವ ಸಿ. ಟಿ. ರವಿ ಜಿಲ್ಲೆಯ ಜನರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, "ಚಿಕ್ಕಮಗಳೂರು ಜಿಲ್ಲೆ ನಿರಂತರ ಅಭಿವೃದ್ಧಿಯನ್ನು ಕಾಣುತ್ತಿದೆ" ಎಂದು ಹೇಳಿದ್ದಾರೆ. ಬಜೆಟ್‌ನಲ್ಲಿ ಜಿಲ್ಲೆಯ ಜನರ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ; ಬಿ. ಸಿ. ಪಾಟೀಲ್ ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ; ಬಿ. ಸಿ. ಪಾಟೀಲ್

ಚಿಕ್ಕಮಗಳೂರು ಜಿಲ್ಲೆಯ ಜನತೆಯ ಹಾಗೂ ಜನ ಪ್ರತಿನಿಧಿಗಳ ಬಹುದಿನದ ಬೇಡಿಕೆಗಳಾದ ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಸಹಕಾರ ಒಕ್ಕೂಟ ಸ್ಥಾಪನೆ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಕುರಿತಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಸಿಟಿ ರವಿ ಮುಂದೆ ಕೈಕಟ್ಟಿ ನಿಂತ 'ಸಿಂಗಂ' ಅಣ್ಣಾಮಲೈ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ಸಿಟಿ ರವಿ ಮುಂದೆ ಕೈಕಟ್ಟಿ ನಿಂತ 'ಸಿಂಗಂ' ಅಣ್ಣಾಮಲೈ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

Separate Milk Federation For Chikkamagalur District CT Ravi Meets Yediyurappa

2021-22 ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡಿ, 100 ಕೋಟಿ ರೂಪಾಯಿ ಅನುದಾನವನ್ನು ಪ್ರಸಕ್ತ ವರ್ಷದಲ್ಲಿ ಕಾಯ್ದರಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು.

ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ಟಿದ್ದಾರೆ; ಸಿ. ಟಿ. ರವಿ ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ಟಿದ್ದಾರೆ; ಸಿ. ಟಿ. ರವಿ

ಈ ಸಂದರ್ಭದಲ್ಲಿ ವಿಧಾನಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಜಿಲ್ಲೆಯ ಶಾಸಕರಾದ ಬೆಳ್ಳಿ ಪ್ರಕಾಶ್ ಹಾಗೂ ಎಂ. ಪಿ. ಕುಮಾರಸ್ವಾಮಿ ಅವರು ಸಿ. ಟಿ. ರವಿ ಅವರ ಜೊತೆಗಿದ್ದರು.

Recommended Video

ಅಸಮಾಧಾನ ಶಮನಕ್ಕೆ ಸಿಎಂ ಬಿಎಸ್‌ವೈ ಭೋಜನಕೂಟ, ಹಲವರು ಶಾಸಕರು ಗೈರು | Oneindia Kannada

ಪ್ರಸ್ತುತ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಸೇರಿಸಿ ಹಾಸನ ಹಾಲು ಒಕ್ಕೂಟವಿದೆ. ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ.

English summary
General Secretary of Bharatiya Janata Party and Chikkamagaluru MLA C. T. Ravi met chief minister B. S. Yediyurappa and demand for the separate milk federation for Chikkamagalur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X