ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಯಲು ಇದ್ದ ತಡೆ ನಿವಾರಣೆ

|
Google Oneindia Kannada News

ಚಿಕ್ಕಮಗಳೂರು, ಜೂನ್ 26 : ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿಗೆ ಇದ್ದ ಅಡೆ-ತಡೆ ನಿವಾರಣೆಯಾಗಿದೆ. ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯವಾಗಿದೆ ಎಂದು ನೈಋತ್ಯ ರೈಲ್ವೆ ಘೋಷಣೆ ಮಾಡಿದೆ.

ಶುಕ್ರವಾರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಈ ಅಂಡರ್‌ ಪಾಸ್ ಕಾಮಗಾರಿ ಕಾರಣದಿಂದಾಗಿ ವಿಳಂಬವಾಗಿತ್ತು.

ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಗೆ ಬರುವ ಸುಮಾರು 5 ರಿಂದ 6 ಲಕ್ಷ ಎಕರೆ ಕೃಷಿ ಭೂಮಿಗೆ ನೀರಾವರಿ ಯೋಜನೆ ಕಲ್ಪಿಸುವ ಯೋಜನೆಯಾಗಿದೆ.

Shivani Ajjampura Railway Underpass Work Completed

ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.

ಸಚಿವರ ಸೂಚನೆಯಂತೆ ರೈಲ್ವೆ ಅಂಡರ್ ಪಾಸ್‌ ಕಾಮಗಾರಿಯನ್ನು ಕೇವಲ 30 ದಿನಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ.

Shivani Ajjampura Railway Underpass Work Completed

"ರೈತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದು ನಮ್ಮ ಕರ್ತವ್ಯ. ನೀರಾವರಿ ಸೌಕರ್ಯ ಒದಗಿಸಿದರೆ ರೈತರಿಗೆ ಆನೆ ಬಲ ನೀಡಿದಂತಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡರೆ ರೈತರಿಗೆ ಸಹಾಯಕವಾಗಲಿದೆ" ಎಂದು ಸುರೇಶ್ ಅಂಗಡಿ ಹೇಳಿದರು.

English summary
South western railway completed Shivani-Ajjampura underpass work. This project will help to complete upper Bhadra dam project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X