• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜೀನಾಮೆ ಒಂದು ಗಿಮಿಕ್: ಶೋಭಾ ಕರಂದ್ಲಾಜೆ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಮೇ 24: ಮೈತ್ರಿ ಸರ್ಕಾರವಿರುವ ರಾಜ್ಯದಲ್ಲಿ ಒಂದೊಂದು ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನವರು ಗೆದ್ದಿದ್ದಾರೆ, ಸೋಲಿನ ನೈತಿಕ ಹೊಣೆ ಹೊತ್ತು ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಪದತ್ಯಾಗ, ಸಿಎಂ ಪಟ್ಟ ಕಾಂಗ್ರೆಸ್‌ಗೆ?

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಬಿಜೆಪಿಗೆ ಅದ್ಬುತ ಜಯ ಸಿಕ್ಕಿದೆ, ಮೋದಿಗೆ ಯಾರ್ಯಾರು ಬೈದಿದ್ದರೋ ಅವರಿಗೆ ಜನ ಕಪಾಳಮೋಕ್ಷ ಮಾಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ 25 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ದಾಖಲೆ ನಿರ್ಮಾಣ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ, ಪ್ರಜ್ವಲ್ ರಾಜೀನಾಮೆ ಕೊಡುವ ವಿಚಾರ ಸಂಬಂಧ ಮಾತನಾಡಿದ ಅವರು, ಇದೆಲ್ಲಾ ಒಂದು ಗಿಮಿಕ್ ಅಷ್ಟೆ, ನಾಟಕ ಎಂದು ವ್ಯಂಗ್ಯವಾಡಿದರು.

English summary
shobha karandlaje demands kumaraswamy and parameshwar to resign from their position.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X