ಚಿಕಿತ್ಸೆ ಪಡೆಯದವರಿಗೆ ಜೀವಾವಧಿ ಶಿಕ್ಷೆ ಆಗಬೇಕು; ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಏಪ್ರಿಲ್ 04: "ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರಗಳು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ. ಆದರೆ ತಬ್ಲಿಘಿ ಜಮಾತ್ ಸಭೆಯಲ್ಲಿ‌ ಪಾಲ್ಗೊಂಡವರು ಹೆಚ್ಚು ಸೋಂಕು ಹರಡುತ್ತಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಂಡಿದ್ದವರು ತಾವಾಗಿಯೇ ಬಂದು ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಅಂಥವರಿಗೆ ಜೀವಾವಧಿ ಶಿಕ್ಷೆ ಆಗಬೇಕು" ಎಂದು ಪ್ರತಿಕ್ರಿಯಿಸಿದ್ದಾರೆ ಸಂಸದೆ ಶೋಭಾ ಕರಂದ್ಲಾಜೆ.

"ಆ ಸಭೆಗೆ ಹೋಗಿದ್ದ ಹಲವರು ನಾಪತ್ತೆಯಾಗಿದ್ದಾರೆ. ದೆಹಲಿಗೆ ಹೋಗಿದ್ದವರ ಪತ್ತೆ ಹಚ್ಚುವವರ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಆದರೆ ಅವರಿಗೆ ಸಹಕಾರ ಸಿಗುತ್ತಿಲ್ಲ. ತಾವಾಗಿಯೇ ಬಂದು ಚಿಕಿತ್ಸೆ ಪಡೆದುಕೊಳ್ಳಿ ಎಂದು ಹೇಳುತ್ತಿದ್ದರೂ ಯಾರೂ ಮುಂದೆ ಬರುತ್ತಿಲ್ಲ. ಇದರ ಹಿಂದಿನ ಉದ್ದೇಶ ತಿಳಿಯುತ್ತಿಲ್ಲ. ಕಾನೂನನ್ನು ಪಾಲನೆ ಮಾಡುತ್ತಿಲ್ಲ ಅಂದರೆ ಇದರ ಹಿಂದೆ ಯಾವುದೋ ಷಡ್ಯಂತ್ರ ಇದೆ ಎಂದರ್ಥ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Shobha Karandlaje Reaction To Tablighi Jamath Members Not Coming To Treatment

ಈ ರೀತಿ ಕಾನೂನು ಉಲ್ಲಂಘನೆ ಮಾಡುವಂಥವರಿಗೆ ಕಾನೂನು ರುಚಿ ಹೇಗಿದೆ ಎಂದು ತೋರಿಸಬೇಕು. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ. ಇದು ನಮ್ಮ ಮನವಿ ಕೂಡ. ಕೊರೊನಾ ತಡೆಗಟ್ಟುವ ದೃಷ್ಟಿಯಿಂದ ಎಲ್ಲಾ ಕೆಲಸಗಳಿಗೆ ಸಾರ್ವಜನಿಕರು ಕೈಜೋಡಿಸಿದ್ದಾರೆ ಎಂದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+