• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದೆಂದು ಅಂದುಕೊಂಡಿದ್ದೆ: ಶೋಭಾ

By ಚಿಕ್ಕಮಗಳೂರು ಪ್ರತಿನಿಧಿ
|
   ಲೋಕ ಸಭೆ ಚುನಾವಣೆ 2019ರಲ್ಲಿ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಶೋಭಾ ಕರಂದ್ಲಾಜೆ | Oneindia Kannada

   ಚಿಕ್ಕಮಗಳೂರು, ಅಕ್ಟೋಬರ್.11: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ಸದ್ಯ ವರಿಷ್ಟರ ಸೂಚನೆ ಮೇರೆಗೆ ನಾನು ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಪಕ್ಷದ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

   ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?

   ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಕಡೆ ಬಿಜೆಪಿ ಗೆಲ್ಲುತ್ತದೆ.ಈ ಮೂಲಕ ಬಿಜೆಪಿಗೆ ಜನ ಬೆಂಬಲ ಇದೆ ಎಂಬುದು ಸಾಬೀತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

   ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶೋಭಾ ಕರಂದ್ಲಾಜೆ

   ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದ ಶೋಭಾ, ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸರ್ಕಾರ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಗಡೆಯೇ ಸಾಕಷ್ಟು ಭಿನ್ನಾಭಿಪ್ರಾಯ ಇದೆ. ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಶೋಭಾ ತಿಳಿಸಿದರು.

   English summary
   Shobha Karandlaje Said that I thought i would not contest the Lok Sabha election. But at present, I do not tell any decision.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X